

ಚಿಕ್ಕಮಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಚುನಾವಣೆಗು ಮುನ್ನ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿರುವಂತೆ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಾರ್ಷಿಕ ೨೦೦ ಕೋಟಿ ರೂ. ಅನುದಾನ ಕೂಡಲೇ ಮೀಸಲಿಡಬೇಕು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿ ಪ್ರಮುಖ ಪ್ರೀತಮ್ ಒತ್ತಾಯಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗತ್ವ ಅಲ್ಪಸಂಖ್ಯಾತರಿಗೆ ವಸತಿ ಸೌಲಭ್ಯ ನೀಡಬೇಕು. ನಮ್ಮ ಸಮುದಾಯದವರಿಗೆ ವಸತಿಗಾಗಿ ಪ್ರತ್ಯೇಕ ಯೋಜನೆ ರೂಪಿಸಬೇಕು ಎಂದು ಅಗ್ರಹಿಸಿದರು.
ಲಿಂಗಪ್ಪ ಅಲ್ಪಸಂಖ್ಯಾತರು ಉದ್ಯಮಶೀಲತೆಯಲ್ಲಿ ತೊಡಗಿಕೊಳ್ಳಲು ಯೋಜನೆ ರೂಪಿಸಬೇಕು. ಇದಕ್ಕಾಗಿ ಪ್ರತಿ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗೆ ಎರಡು ಲಕ್ಷ ರೂ ಆರ್ಥಿಕ ನೆರವನ್ನು ಬಜೆಟ್‌ನಲ್ಲಿಯೇ ಮೀಸಲಿಡಬೇಕು. ಉಚಿತವಾಗಿ ಲಿಂಗ ಪರಿವರ್ತನೆ ಶಸ್ತç ಚಿಕಿತ್ಸೆ ನಡೆಸಬೇಕು ಮತ್ತು ಶಸ್ತç ಚಿಕಿತ್ಸೆಯ ನಂತರ ಆರು ತಿಂಗಳ ಆರೈಕೆಯ ಬೆಂಬಲವನ್ನು ಸರ್ಕಾರವೇ ನೀಡಬೇಕು ಎಂದು ಹೇಳಿದರು.
ಶೇ. ೧ರಷ್ಟು ಮೀಸಲಾತಿಯಲ್ಲಿ ಉದ್ಯೋಗವನ್ನು ಪಡೆಯಲು ಸರ್ಕಾರವು ಲಿಂಗತ್ವ ಅಲ್ಪಸಂಖ್ಯಾತರಿಗೆ ತರಬೇತಿ ನೀಡಲು ಬಜೆಟ್ ನಲ್ಲಿ ಯೋಜನೆ ರೂಪಿಸಬೇಕು. ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಸರ್ವತೋಮುಖ ಅಭಿವೃದ್ಧಿಗಾಗಿ ವಾರ್ಷಿಕ ೨೦೦ ಕೋಟಿ ರೂ. ಅನುದಾನ ಮೀಸಲಿಡಬೇಕು. ಇದಕ್ಕಾಗಿ ಪ್ರತ್ಯೇಕವಾದ ನಿಯಮಾವಳಿ ರೂಪಿಸಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಲಿಂಗತ್ವ ಮತ್ತು ಲೈಂಗಿಕ ಬಹುತ್ವ ಕ್ಕಾಗಿ ಚಳವಳಿ ಪ್ರಮುಖರಾದ ಮೇಘರಾಜ್ ಮಲ್ನಾಡ್, ಫಾಸಿಮತ್ ನಾಜಿಯಾ ಉಪಸ್ಥಿತರಿದ್ದರು.