ಲೈಂಗಿಕ ದೌರ್ಜನ್ಯ ತಡೆಗೆ ವೈದ್ಯಾಧಿಕಾರಿಗಳ ಜವಾಬ್ದಾರಿ ಹಿರಿದು

oplus_2
oplus_2
Published on

ಚಿತ್ರದುರ್ಗ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯಾಧಿಕಾರಿಗಳ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಜಿಲ್ಲಾ ತಾಯಿ ಮಕ್ಕಳ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಡಿ.ಎಂ. ಅಭಿನವ್ ಹೇಳಿದರು.

ನಗರದ ಐಎಂಎ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣಾ ಮಸೂದೆ(ಪೋಕ್ಸೋ)ಕುರಿತು ಮಾಹಿತಿ ಶಿಕ್ಷಣ, ಸಂವಹನ ತರಬೇತಿ ಕಾರ‌್ಯಾಗಾರದಲ್ಲಿ ಮಾತನಾಡಿದರು.

ಪ್ರಕರಣಗಳನ್ನು ದಾಖಲಿಸುವುದು, ದಾಖಲಾತಿಗಳ ನಿರ್ವಹಣೆ, ಸಂಬಂಧಿಸಿದ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳಿಗೆ ಮಾಹಿತಿ ಒದಗಿಸುವುದು ಹಾಗೂ ಸಂತ್ರಸ್ತ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವ ಕುರಿತು ವಿವರಿಸಿದರು.

ಜಿಲ್ಲಾ ಆರೋಗ್ಯ ಇಲಾಖೆ ಕಾನೂನು ಸಲಹೆಗಾರ ಉಮೇಶ್ ಮಾತನಾಡಿ, ಪೋಕ್ಸೋ ಕಾಯ್ದೆಯಡಿ ಮರಣದಂಡನೆಯಂಥ ಕಠಿಣ ಶಿಕ್ಷೆಯನ್ನು ಅಪರಾಧಿಗಳಿಗೆ ವಿಧಿಸಬಹುದಾಗಿದೆ ಎಂದರು.

ಜಿಲ್ಲಾಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ. ರೂಪಶ್ರೀ ಮಾತನಾಡಿ, ಜಿಲ್ಲಾಸ್ಪತ್ರೆ ಮೆಡಿಸನ್ ವಿಭಾಗದ ಫೋರೆನ್ಸಿಕ್ ತಜ್ಞ ಡಾ. ವೇಣು ಮಾತನಾ ಡಿದರು. ಡಾ.ರೇಖಾ, ಡಾ. ನಾಗರಾಜ್, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಬಿ.ವಿ. ಗಿರೀಶ್, ಡಾ. ವೆಂಕಟೇಶ್, ಡಾ. ರಾಘವೇಂದ್ರ ಪ್ರಸಾದ್, ಡಾ. ಮಧುಕುಮಾರ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್, ಜಿಲ್ಲಾ ವ್ಯವಸ್ಥಾಪಕ ಪ್ರಫುಲ್ಲಚಂದ್ರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹನುಮಂತ ಗೌಡ ಪೂಜಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net