

ಹಾಸನ: ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶನಿವಾರ ವಿದ್ಯುತ್ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಲೈನ್‌ಮನ್ ವರುಣ್ ಕುಟುಂಸ್ಥರಿಗೆ ಸಂಸದ ಶ್ರೇಯಸ್ ಪಟೇಲ್ ಸಾಂತ್ವನ ಹೇಳಿದರು.
ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಮೃತರ ಅಂತಿಮ ದರ್ಶನ ಪಡೆದ ಸಂಸದ ಶ್ರೇಯಸ್ ಪಟೇಲ್ ಅವರು ವರುಣ್ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಅವರಿಗೆ ಧೈರ್ಯ ತುಂಬಿದರು.
ಬಳಿಕ ಮಾತನಾಡಿದ ಸಂಸದರು, ವರುಣ್ ಅವರ ಅಗಲಿಕೆಯಿಂದ ತೀವ್ರ ದುಃಖವಾಗಿದೆ. ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ವರುಣ್ ಅವರ ಕುಟುಂಬಸ್ಥರ ಜತೆಗೆ ನಾವು ಸದಾ ಇರುತ್ತೇವೆ. ಸರ್ಕಾರದಿಂದ ಸೂಕ್ತ ಪರಿಹಾರ ಕಲ್ಪಿಸುವ ಕೆಲಸ ಮಾಡಲಾಗುವುದು. ಈ ಸಂಬಂಧ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಈ ದುರ್ಘಟನೆಗೆ ನಿಖರ ಕಾರಣ ಏನೆಂಬುದು ತನಿಖೆಯಿಂದ ತಿಳಿಯಬೇಕಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.