ಲೋಕಸಭೆ ಚುನಾವಣೆ ಸ್ಪರ್ಧೆಗೆ ಟಿಕೆಟ್ ನೀಡಿ

bulla
Published on

ಬಸವಕಲ್ಯಾಣ: ಕಾಂಗ್ರೆಸ್ ಸಂಘಟನೆಗಾಗಿ ೪೭ ವರ್ಷದಿಂದ ಶ್ರಮಿಸಿದ್ದು, ಪಕ್ಷದ ಸೇವೆ ಪರಿಗಣಿಸಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಸವರಾಜ ಬುಳ್ಳಾ ಮನವಿ ಮಾಡಿದರು.

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ತಮಗೆ ಟಿಕೆಟ್‌ನೀಡಿದಲ್ಲಿ ಗೆಲುವು ಖಚಿತ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
೧೯೭೬ರ ರಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ, ಎರಡು ಅವಧಿಗೆ ಜಿಲ್ಲಾಧ್ಯಕ್ಷನಾಗಿ ಹಾಗೂ ರಾಜ್ಯ ಘಟಕದ ವಿವಿಧ ಹುದ್ದೆಗಳಲ್ಲಿ ಪದಾಧಿಕಾರಿಯಾಗಿ ಸಂಘಟನೆಗೆ ದುಡಿದಿದ್ದೇನೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಉಪಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ವಿಧಾನಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಟಿಕೆಟ್ ನೀಡದಿದ್ದರೂ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ್ದೇನೆ. ಪಕ್ಷದ ನಿಷ್ಠಾವಂತನಾದ ನನಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ವರಿಷ್ಠರಿಗೆ ಮನವಿ ಮಾಡಿದರು.

ಬೀದರ್‌ನ ಪ್ರಸ್ತುತ ಸಂಸದರು ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಆದ್ದರಿಂದ ಈ ಬಾರ ಬಿಜೆಪಿ ಸೋಲು ಖಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net