

ಯಾದಗಿರಿ: ಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿಸುವ ನಿಟ್ಟಿನಲ್ಲಿ ಹಲವು ಅಭಿಯಾನಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ ನಾಯ್ಕಲ್ ತಿಳಿಸಿದರು.
ಮೊದಲ ಹಂತದಲ್ಲಿ ಮತದಾರ ಚೇತನ ಮಹಾಭಿಯಾನ ಹೆಸರಿನ ಕಾರ್ಯಕ್ರಮ ರೂಪಿಸಲಾಗಿದ್ದು ಇದಕ್ಕಾಗಿ ತಂಡ ರಚಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಹೊಂದುವುದು ಪ್ರತಿಯೊಬ್ಬ ಪ್ರಜೆಯ ಹಕ್ಕು. ಈ ನಿಟ್ಟಿನಲ್ಲಿ ಪಟ್ಟಿಯಲ್ಲಿ ಹೆಸರು ತಪ್ಪದಂತೆ ಜಾಗೃತಿ ವಹಿಸಲು ಜಿಲ್ಲಾ ಸಮಿತಿ ರಚಿಸಲಾಗುತ್ತಿದ್ದು, ಇದರಲ್ಲಿ ರಾಯಚೂರು ಸಂಸದ ರಾಜಾ ಅಮರೆಶ್ವರ ನಾಯಕ, ಎಂಎಲ್ಸಿ ಬಿ.ಜಿ.ಪಾಟೀಲ ಹಾಗೂ ನಗರಸಭೆ ಸದಸ್ಯ ಹಣಮಂತ ಇಟಗಿ ಸದಸ್ಯರಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಆಯಾ ವಿಧಾನಸಭಾ ಮತ್ತು ಶಕ್ತಿಕೇಂದ್ರಗಳ ವ್ಯಾಪ್ತಿಯಲ್ಲಿ ತಂಡ ರಚಿಸಿ, ಮತದಾರರ ಪಟ್ಟಿ ಪರಿಷ್ಕರಣೆಯ ಬಗ್ಗೆ ಅವಲೋಕಿಸಲಾಗುವುದು.ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಕಾಣಲು ದೇಶದ ಜನತೆ ಬಯಸಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರ ನಿದರ್ೇಶನದಂತೆ ಹೊಸ ಮತದಾರರ ನೋಂದಣಿ ಮತ್ತು ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಆದ್ಯತೆಯ ಮೇರೆಗೆ ಮಾಡಲಾಗುವುದು ಎಂದರು.
ಪಕ್ಷದ ಯುವಮೋಚರ್ಾ ಜಿಲ್ಲಾಧ್ಯಕ್ಷ ಮೌನೇಶ ಬೆಳಗೇರಾ, ಜಿಲ್ಲಾ ಮಾಧ್ಯಮ ಪ್ರಮುಖ ವಿರೂಪಾಕ್ಷಯ್ಯ ಸ್ವಾಮಿ ಹೆಡಗಿಮುದ್ರಾ ಇದ್ದರು.