

ಹಾಸನ: ಲಂಚ ಸ್ವೀಕರಿಸುವಾಗ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಗರದ ನಗರದ ಬಿ.ಕಾಟೀಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದ್ದು, ಬಿಲ್ ಕಲೆಕ್ಟರ್‌ನನ್ನು ಬಂಧಿಸಲಾಗಿದೆ.
ಬಿ.ಕಾಟೀಹಳ್ಳಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಲೋಕೇಶ್ ಬಂಧಿತ ಆರೋಪಿಯಾಗಿದ್ದಾನೆ.ಮೂರು ಇ-ಸ್ವತ್ತು ಮಾಡಿಕೊಡಲು 15ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ , ಬುಧವಾರ ಒಂದು ಇ-ಸ್ವತ್ತು ಮಾಡಿಕೊಟ್ಟು ಮೂರು ಸಾವಿರ ಲಂಚ ಪಡೆಯುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ.
ಲಂಚದ ಹಣದ ಸಮೇತ ಲೋಕೇಶ್ ಸಿಕ್ಕಿಬಿದ್ದಿದ್ದಾರೆ.ಈ ಸಂಬಂಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆದಿತ್ತು.