ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

CTD 17 N.VASUDEVARAMA--05
Published on

ಚಿತ್ರದುರ್ಗ:ಲೋಕಾಯುಕ್ತ ಅಧಿಕಾರಿಗಳು ನ.20, 21ರಂದು ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ದೂರು,ಅಹವಾಲು ಸ್ವೀಕರಿಸುವರು. 20ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಹೊಸದುರ್ಗ ತಾಲೂಕು ಕಚೇರಿ, ಅಂದು ಮಧ್ಯಾಹ್ನ 2ರಿಂದ ಸಂಜೆ 5 ರ ವರೆಗೆ ಹೊಳಲ್ಕೆರೆ ತಾಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷಕರು ಅಹವಾಲು ಸ್ವೀಕರಿಸುವರು.
20ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಮೊಳಕಾಲ್ಮೂರು ತಾಲೂಕು ಕಚೇರಿಯಲ್ಲಿ ಹಾಗೂ ಅಂದು ಮಧ್ಯಾಹ್ನ 2.30 ರಿಂದ ಸಂಜೆ 5.30ರವರೆಗೆ ಚಳ್ಳಕೆರೆ ತಾಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷಕರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. 21ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಹಿರಿಯೂರು ತಾಲೂಕು ಕಚೇರಿಯಲ್ಲಿ ಹಾಗೂ ಅಂದು ಮಧ್ಯಾಹ್ನ 2 ರಿಂದ ಸಂಜೆ 5ರವರೆಗೆ ಚಿತ್ರದುರ್ಗ ತಾ ಲೂಕು ಕಚೇರಿಯಲ್ಲಿ ಪೊಲೀಸ್ ಉಪಾಧೀಕ್ಷಕರು ಅಹವಾಲು ಸ್ವೀಕರಿಸುವರೆ ಲೋಕಾಯುಕ್ತ ಎಸ್‌ಪಿ ಎನ್.ವಾಸುದೇವರಾಮ ತಿಳಿಸಿದ್ದಾರೆ.
(ಸಿಟಿಡಿ 17 ಎನ್.ವಾಸುದೇವರಾಮ)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net