

ಚಿತ್ರದುರ್ಗ:ಲೋಕಾಯುಕ್ತ ಅಧಿಕಾರಿಗಳು ಮೇ 23ರಿಂದ ಎರಡು ದಿನಗಳ ಕಾಲ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸಾರ್ವಜನಿಕರಿಂ ದ ದೂರು ಹಾಗೂ ಅಹವಾಲು ಸ್ವೀಕರಿಸಲಿದ್ದಾರೆ. ಮೇ23ರಂದು ಬೆಳಗ್ಗೆ 10ರಿಂದ 1ಗಂಟೆಯವರೆಗೆ ಹೊಸದುರ್ಗ,ಮೊಳಕಾಲ್ಮೂರು ತಾ ಲೂಕು ಕಚೇರಿಗಳಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5ರವರೆಗೆ ಹೊಳಲ್ಕೆರೆ ಮತ್ತು ಚಳ್ಳಕೆರೆ ತಾಲೂಕು ಕಚೇರಿಗಳಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ. 24ರಂದು ಬೆಳಗ್ಗೆ 10ರಿಂದ 1 ಗಂಟೆವರೆಗೆ ಹಿರಿಯೂರು ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ5ರವರೆಗೆ ಚಿತ್ರದುರ್ಗ ತಾಲೂಕು ಕಚೇರಿಗಳಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಲೋಕಾಯುಕ್ತ ಎಸ್‌ಪಿ ಎನ್.ವಾಸುದೇವರಾಮ ತಿಳಿಸಿದ್ದಾರೆ.