ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

CTD N.VASUDEVARAMAA....
Published on

ಚಿತ್ರದುರ್ಗ:ಲೋಕಾಯುಕ್ತ ಅಧಿಕಾರಿಗಳು ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನ.29ರಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕರು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಹಿರಿಯೂರು ತಾಪಂ ಕಚೇರಿಯಲ್ಲಿ ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಚಿತ್ರದುರ್ಗ ತಾಪಂ ಕಚೇರಿಯಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.

ಅದೇ ದಿನ ಡಿವೈಎಸ್‌ಪಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಮೊಳಕಾಲ್ಮೂರು ತಾಪಂ ಕಚೇರಿ,ಮಧ್ಯಾಹ್ನ 2.30ರಿಂದ ಸಂ ಜೆ 5.30 ರವರೆಗೆ ಚಳ್ಳಕೆರೆ ತಾಪಂ ಕಚೇರಿಯಲ್ಲಿ ಅಹವಾಲು ಸ್ವೀಕರಿಸುವರು. 30ರಂದು ಪೊಲೀಸ್ ನಿರೀಕ್ಷಕರು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಹೊಸದುರ್ಗ ತಾಪಂ ಕಚೇರಿ,ಮಧ್ಯಾಹ್ನ 2.30 ರಿಂದ ಸಂಜೆ 5.30ರವರೆಗೆ ಹೊಳಲ್ಕೆರೆ ತಾಪಂ ಕಚೇರಿಯಲ್ಲಿ ಅಹವಾಲು ಸ್ವೀಕರಿಸುವರೆಂದು ಚಿತ್ರದುರ್ಗ ಲೋಕಾಯುಕ್ತ ಎಸ್‌ಪಿ ಎನ್.ವಾಸುದೇವರಾಮ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net