ಲೋಕ್ ಅದಾಲತ್‌ನಲ್ಲಿ 6,425 ಪ್ರಕರಣಗಳು ಇತ್ಯರ್ಥ

mysore
Published on

ಮೈಸೂರು: ಜಿಲ್ಲೆಯಲ್ಲಿ ಇತ್ತೀಚಿಗೆ ನಡೆದ ಲೋಕ್ ಅದಾಲತ್‌ನಲ್ಲಿ 6,425 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿಯಿರುವ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ಲೋಕ್ ಅದಾಲತ್ ಆಯೋಜಿಸಲಾಗಿತ್ತು.

ಮೈಸೂರು ನಗರ ಮತ್ತು ತಾಲೂಕಿನ ನ್ಯಾಯಾಲಯಗಳಲ್ಲಿ ವಿಚಾರಣೆಗೆ 1,19,788 ಪ್ರಕರಣಗಳು ಬಾಕಿ ಇದ್ದವು. ಈ ಪೈಕಿ 59,490 ಸಿವಿಲ್ ಹಾಗೂ 60,298 ಕ್ರಿಮಿನಲ್ ಪ್ರಕರಣಗಳಾಗಿದ್ದವು.

ಈ ಪೈಕಿ 39,980 ಪ್ರಕರಣಗಳನ್ನು ರಾಜಿಯಾಗಬಹುದಾದ ಪ್ರಕರಣಗಳಾಗಿವೆ. ಅವುಗಳ ಪೈಕಿ 26,866 ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು. ರಾಜಿ ಸಂಧಾನಕ್ಕಾಗಿ ತೆಗೆದುಕೊಂಡ ಪ್ರಕರಣಗಳಲ್ಲಿ (ನ್ಯಾಯಾಲಯದಲ್ಲಿ ಬಾಕಿ ಇರುವ) 6,425 ಪ್ರಕರಣಗಳನ್ನು ಬಗೆಹರಿಸಲಾಗಿದೆ.

ಈ ಬಾರಿ ಸಲ 41 ದಂಪತಿಗಳು ತಮ್ಮ ಮಧ್ಯದ ವಾಜ್ಯಗಳನ್ನು ಬಗೆಹರಿಸಿಕೊಂಡು ಮತ್ತೆ ಒಂದಾಗಿದ್ದಾರೆ. ಕೌಟುಂಬಿಕ ವಿವಾದದ ಪ್ರಕರಣಗಳಲ್ಲಿ ಮೈಸೂರು ನಗರ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ವ್ಯಾಜ್ಯ ನಡೆಯುತ್ತಿದ್ದವು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಜಿ.ದಿನೇಶ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net