ಲ್ಯಾಪ್‌ಟಾಪ್ ವಿತರಣೆ ಮರು ಆರಂಭಿಸಿ

CTD 26 DVP--005
Published on

ಚಿತ್ರದುರ್ಗ: ವಸತಿನಿಲಯಗಳ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವ ಕಾರ್ಯ ಸ್ಥಗಿತಗೊಳಿಸಿದ್ದು, ಮರು ಆರಂಭಿಸಬೇಕು ಎಂದು ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಸೋಮವಾರ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಒತ್ತಾಯಿಸಿ ಮನವಿ ರವಾನಿಸಿದರು.

ಎಲ್ಲ ವಸತಿನಿಲಯಗಳನ್ನು ಶೈಕ್ಷಣಿಕ ಪೂರಕ ಕೇಂದ್ರವಾಗಿ ನಿರ್ಮಿಸಬೇಕು. ಪ್ರವೇಶ ಪಡೆದ ಪ್ರತಿ ವಿದ್ಯಾರ್ಥಿಗೂ ಶಿಷ್ಯವೇತನ ಮಂಜೂರು ಮಾಡಬೇಕು. ಜತೆಗೆ ಪ್ರಸ್ತುತ ಬೆಲೆ ಏರಿಕೆ ಗಮನದಲ್ಲಿಟ್ಟುಕೊಂಡು ಶೇ.50 ಶಿಷ್ಯವೇತನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಸ್ಪೋಕನ್ ಇಂಗ್ಲಿಷ್, ಬೇಸಿಕ್ ಕಂಪ್ಯೂಟರ್ ತರಬೇತಿ ನೀಡಬೇಕು. ಪಾಲಕರು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ಮೇಲ್ವಿಚಾರಕರು ಒಳಗೊಂಡ

ಮೇಲುಸ್ತುವಾರಿ ಸಮಿತಿ ರಚಿಸಿ ಶಿಸ್ತು ಕಾಪಾಡಲು ಆದ್ಯತೆ ನೀಡಬೇಕು.
ಪ್ರತಿ ತಿಂಗಳು ಸಮಿತಿ ಸಭೆ ನಡೆಸಿ ಕುಂದುಕೊರತೆ ಆಲಿಸುವ ಮೂಲಕ ಸಮಸ್ಯೆಗಳಿದ್ದಲ್ಲಿ ಬಗೆಹರಿಸಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ಗ್ರಂಥಾಲಯ ತೆರೆಯಬೇಕು ಎಂದು ಒತ್ತಾಯಿಸಿದರು.

ಪರಿಷತ್ ಜಿಲ್ಲಾಧ್ಯಕ್ಷ ಜೆ.ಶಾಂತಕುಮಾರ್, ಪ್ರಧಾನ ಕಾರ್ಯದರ್ಶಿ ಬಸವರಾಜ್ ಸಿಂಗಾಪುರ, ನಗರಾಧ್ಯಕ್ಷ ಬಿ.ಚೌಡೇಶ್, ತಾಲೂಕು ಅಧ್ಯಕ್ಷ ಸಚ್ಚಿನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net