ಲ್ಯಾಬ್ ಟೆಕ್ನೀಷಿಯನ್ಸ್ ಸೇವೆ ಅನನ್ಯ

4 sgr 1 -- BARALLA
Published on

ಶಿಕಾರಿಪುರ: ಕರೊನಾ ನಿಯಂತ್ರಣದಲ್ಲಿ ಕರೊನಾ ಸೇನಾನಿಗಳ ಜತೆ ಲ್ಯಾಬ್ ಟೆಕ್ನೀಷಿಯನ್ಸ್​ಗಳ ಸೇವೆ ಅನನ್ಯ ಎಂದು ಜಿಲ್ಲಾ ಒಕ್ಕೂಟದ ಅಧ್ಯಕ್ಷ ಮ.ಸ ನಂಜುಂಡಸ್ವಾಮಿ ಹೇಳಿದರು.

ಸರ್ಕಾರಿ ನೌಕರರ ಭವನದಲ್ಲಿ ತಾಲೂಕು ಲ್ಯಾಬ್ ಟೆಕ್ನೀಷಿಯನ್ ಅಸೋಸಿಯೇಷನ್​ನಿಂದ ಕರೊನಾ ಸೇನಾನಿಗಳಿಗೆ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕರೊನಾ ಸೇನಾನಿಗಳ ಪ್ರಾಮಾಣಿಕ ಸೇವೆಯಿಂದ ಜನರಲ್ಲಿ ಜಾಗೃತಿ ಮೂಡುತ್ತಿದೆ. ಕರೊನಾದಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಅವರಿಗೆ ಈ ಕಾರ್ಯದಲ್ಲಿ ಸಂಪೂರ್ಣ ಸಹಕಾರ ನೀಡಬೇಕು ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಪ್ಪ ಮಾತನಾಡಿ, ಕರೊನಾ ನಿಯಂತ್ರಣ ಕೇವಲ ಸರ್ಕಾರ,ಇಲಾಖೆಗಳ ಕೆಲಸವಲ್ಲ. ನಾವು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಆರೋಗ್ಯವಂತ ಸಮಾಜ ನಮ್ಮ ಗುರಿಯಾಗಬೇಕು ಎಂದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಿನ್ನಪ್ಪ, ಜಿಲ್ಲಾ ಲ್ಯಾಬ್ ಟೆಕ್ನಿಷಿಯನ್ಸ್ ಸಂಘದ ಅಧ್ಯಕ್ಷ ಬಸವರಾಜ್, ತಾಲೂಕು ಅಧ್ಯಕ್ಷ ತಿಪ್ಪೇಶ್, ಡಾ.ಹರ್ಷವರ್ಧನ್, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಹಾಲಪ್ಪ, ಖಜಾಂಚಿ ಕೇಶವ್ ಮತ್ತು ಜಗದೀಶ್,ಜಯಪ್ಪ. ನರಸಿಂಹ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net