ವಕೀಲ ರಾಕೇಶ್‌ಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯ

Published on

ಚಾಮರಾಜನಗರ: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿ ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಮಾಡಿರುವ ವಕೀಲ ರಾಕೇಶ್ ಕಿಶೋರ್‌ಗೆ ಗಲ್ಲುಶಿಕ್ಷೆ ವಿಧಿಸಬೇಕೆಂದು ದಲಿತ ಸಂಘರ್ಷ ಸಮಿತಿ(ಸಂಯೋಜಕ) ಮತ್ತು ಜನ ಹಿತಾಶಕ್ತಿ ಹೋರಾಟ ವೇದಿಕೆ ನೇತೃತ್ವದಲ್ಲಿ ಮುಖಂಡರು ಶನಿವಾರ ಒತ್ತಾಯಿಸಿದರು.

ನಗರದ ಶ್ರೀಭುವನೇಶ್ವರಿ ವೃತ್ತದಲ್ಲಿ ಶನಿವಾರ ಜಮಾಯಿಸಿದ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದರು. ಇದೇ ವೇಳೆ ಜಿಲ್ಲಾಧ್ಯಕ್ಷ ರಾಮಸಮುದ್ರ ಸುರೇಶ್ ಮಾತನಾಡಿ, ದಲಿತ ಸಮುದಾಯಕ್ಕೆ ಸೇರಿದ ನ್ಯಾಯಮೂರ್ತಿ ಗವಾಯಿ ಅವರು ಸಂವಿಧಾನದ ತತ್ವಗಳ ಆಧಾರದ ಮೇಲೆ ಅತ್ಯಂತ ಘನತೆಯಿಂದ ಕಾರ್ಯ ನಿರ್ವಹಿಸುತ್ತಿರುತ್ತಾರೆ. ಇಂತಹ ನ್ಯಾಯಾಧೀಶರ ಮೇಲೆ ಸನಾತನಿ ಮನಸ್ಥಿತಿಯ ವಕೀಲನೊಬ್ಬ ಶೂ ಎಸೆಯಲು ಯತ್ನಿಸಿರುವುದು ಪೂರ್ವ ನಿಯೋಜಿತ ದಾಳಿ ಎಂದು ಹೇಳಿದರು.

ವಕೀಲ ರಾಜೇಶ್ ಕಿಶೋರ್ ಮನುವಾದಿ. ಧರ್ಮದ ಹೆಸರಿನಲ್ಲಿ ಸಮಾಜವನ್ನು ಇಬ್ಬಾಗಿಸಿ ಪರಸ್ಪರ ದ್ವೇಷ ಮತ್ತು ಮನುವಾದದ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ನಾಥೂರಾಮ್ ಗೋಡ್ಸೆಯಂತಹ ಕೊಲೆಗಡುಕ ಮನಸ್ಥಿತಿಯ ಇಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಕೀಲನ ವಿರುದ್ಧ ಕೂಡಲೇ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಒಳಪಡಿಸಬೇಕು. ನೀತಿ ಸಂಹಿತೆ ವಿರುದ್ಧವಾಗಿ ನಡೆದುಕೊಂಡಿದ್ದಾನೆ. ಈತನ ವಿರುದ್ಧ ಉಗ್ರವಾದ ಗಲ್ಲು ಶಿಕ್ಷೆಯನ್ನು ವಿಧಿಸಬೇಕೆಂದು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಯೋಜಕ ಕೆರೆಹಳ್ಳಿ ಬಸವರಾಜ್, ಜಿಲ್ಲಾ ಸಂಚಾಲಕ ಯರಿಯೂರು ರಾಜಣ್ಣ, ಸಿ.ಎಂ.ಶಿವಣ್ಣ, ನಾಗವಳ್ಳಿ ಪಾಪಣ್ಣ, ಉಮ್ಮತ್ತೂರು ಸೋಮಣ್ಣ, ಕಾಡಳ್ಳಿ ನಾಗರಾಜ್, ಪ್ರಭಾವತಿ, ಗಾಳಿಪುರ ಮಹೇಶ, ಅಬ್ರಾರ್ ಅಹಮದ್, ಪ್ರಭು, ಚಂದ್ರಬಾಬು, ಕೆಂಪರಾಜು, ಶರ್ೀ, ಧರಣೇಂದ್ರ, ರಾಜು ಪಣ್ಯದಹುಂಡಿ, ಆಟೋ ಉಮೇಶ್ ಇತರರು ಇದ್ದರು,

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net