ವಕೀಲರ ಮೇಲೆ ಹಲ್ಲೆ, ಶೋಷಣೆ ನಿರಂತರ; ಪ್ರತಿಭಟನೆ

BDVT WEEEB
Published on

ಭದ್ರಾವತಿ: ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹಲವು ವರ್ಷಗಳಿಂದ ವಕೀಲರ ಮೇಲೆ ಹಲ್ಲೆ ಹಾಗೂ ಶೋಷಣೆ ನಡೆಯುತ್ತಿವೆ. ಇತ್ತೀಚೆಗೆ ಹಾಸನ ಹಾಗೂ ಮಂಗಳೂರು ಜಿಲ್ಲೆಗಳಲ್ಲಿ ವಕೀಲರ ಮೇಲೆ ಹಲ್ಲೆ ನಡೆದಿದ್ದು ಅದನ್ನು ತಾಲೂಕು ವಕೀಲರ ಸಂಘ ತೀವ್ರವಾಗಿ ಖಂಡಿಸುತ್ತದೆ. ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ಸರ್ಕಾರವನ್ನು ಹಲವು ಬಾರಿ ಒತ್ತಾಯಿಸಿದ್ದರೂ ಇದುವರೆಗೂ ಜಾರಿಗೆ ತಂದಿಲ್ಲ. ಗೃಹ ಸಚಿವರು ಬೆಳಗಾವಿ ಅಧಿವೇಶದಲ್ಲಿ ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ಪ್ರತಿಭಟನಾನಿರತರು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net