ವಕೀಲರ ಸಂಘದ ಪ್ರತಿಭಟನೆ

16adarshkdga1
Published on

ಮಡಿಕೇರಿ: ವಕೀಲರ ಸಂರಕ್ಷಣೆ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಮಡಿಕೇರಿ ನ್ಯಾಯಾಲಯದ ಮುಂಭಾಗ ಶುಕ್ರವಾರ ವಕೀಲರು ಪ್ರತಿಭಟನೆ ನಡೆಸಿದರು.


ವಕೀಲರ ಸಂಘದ ಅಧ್ಯಕ್ಷ ಕೆ.ಡಿ.ದಯಾನಂದ ಮಾತನಾಡಿ, ವಕೀಲರು ನ್ಯಾಯಾಂಗದ ಗೌರವ ಮತ್ತು ಘನತೆಯನ್ನು ಕಾಪಾಡಿಕೊಡು ಕಕ್ಷಿದಾರರಿಗೆ ನ್ಯಾಯ ಒದಗಿಸುವ ಕೆಲಸದಲ್ಲಿ ತೊಡಗಿದ್ದಾರೆ. ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕೆಲಸ ಮಾಡುವಾಗ ಸಾರ್ವಜನಿಕರು, ಪೊಲೀಸರಿಂದ ದೌರ್ಜನ್ಯ, ಬೆದರಿಕೆ, ಹಲ್ಲೆ ಪ್ರಕರಣಗಳು ನಡೆಯುತ್ತಿವೆ. ಜನಸಾಮಾನ್ಯರಿಗೆ ರಕ್ಷಣೆ ಕೊಡುವ ವಕೀಲರಿಗೆ ರಕ್ಷಣೆ ಇಲ್ಲದಂತಾಗಿದೆ. ವಕೀಲರರು ಭಯದ ವಾತಾವರಣದಲ್ಲಿ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.


ವಕೀಲರ ಸಂರಕ್ಷಣೆ ಕಾಯ್ದೆಯನ್ನು ಜಾರಿಗೆ ತಂದು ವಕೀಲರು ನಿರ್ಭಯವಾಗಿ ಕೆಲಸ ಮಾಡುವಂತಹ ಸನ್ನಿವೇಶವನ್ನು ಸರ್ಕಾರ ಕಲ್ಪಿಸಬೇಕು. ಈಗಿರುವ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆ ತರದಿದ್ದಲ್ಲಿ ಮುಂದಿನ ದಿನಗಳಲ್ಲಿ ವಕೀಲರ ಮೇಲೆ ದೌರ್ಜನ್ಯ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದರು.


ವಿಧಾನಸಭಾ ಬೆಳಗಾವಿ ಅಧಿವೇಶನದಲ್ಲಿ ವಕೀಲರ ಸಂರಕ್ಷಣೆ ಕಾಯ್ದೆಯನ್ನು ಮಂಡಿಸಬೇಕು. ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು. ವಕೀಲರ ಸಂಘದ ಕಾರ್ಯದರ್ಶಿ ಎಂ.ಕೆ.ಅರುಣ್‌ಕುಮಾರ್, ಉಪಾಧ್ಯಕ್ಷ ರತನ್ ತಮ್ಮಯ್ಯ, ಜಂಟಿ ಕಾರ್ಯದರ್ಶಿ ಎಂ.ವಿ.ಸಂಜಯ್‌ರಾಜ್, ಖಜಾಂಚಿ ಬಿ.ಸಿ.ದೇವಿಪ್ರಸಾದ್, ಪದಾಧಿಕಾರಿಗಳಾದ ಡಿ.ಕೆ.ರಾಜೇಶ್, ಪಿ.ಆರ್.ಚಂದನ್, ಡಿ.ಎನ್.ಡೊಮಿನಿಕ್, ಭಾನುಪ್ರಕಾಶ್, ಸದಸ್ಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net