ವಕೀಲರ ಸಂರಕ್ಷಣಾ ಕಾಯ್ದೆಗೆ ಒತ್ತಾಯ

16 CRP 04
ರಾಜ್ಯ ಸರ್ಕಾರವು ವಕೀಲರ ಸಂರಕ್ಷಣಾ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸುವಂತೆ ಆಗ್ರಹಿಸಿ ವಕೀಲರ ಸಂಘದ ವತಿಯಿಂದ ಚನ್ನರಾಯಪಟ್ಟಣದ ತಾಲೂಕು ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಯಿತು.
Published on

ಚನ್ನರಾಯಪಟ್ಟಣ: ರಾಜ್ಯ ಸರ್ಕಾರ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ವಕೀಲರ ಸಂಘದ ವತಿಯಿಂದ ತಾಲೂಕು ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ಮಾಡಲಾಯಿತು.

ನ್ಯಾಯಾಲಯದ ಆವರಣದಿಂದ ಪ್ರತಿಭಟನಾ ಮೆರವಣೆಗೆ ನಡೆಸದ ವಕೀಲರು, ಕೆ.ಆರ್.ವೃತ್ತದಲ್ಲಿ ಸಮಾವೇಶಗೊಂಡು ವಿವಿಧ ಘೋಷಣೆಗಳನ್ನು ಕೂಗಿದರು. ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ವಕೀಲರ ಸಂರಕ್ಷಣಾ ಕಾಯ್ದೆಯನ್ನು ಶೀಘ್ರ ಜಾರಿಗೊಳಿಸಿ ವಕೀಲರು ನಿರ್ಭೀತಿಯ ವಾತಾವರಣದಲ್ಲಿ ಕಾರ್ಯನಿರ್ವಹಿಸಲು ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಬಳಿಕ ತಾಲೂಕು ಕಚೇರಿಗೆ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿ ಶಿರಸ್ತೇದಾರ್ ಬಿ.ಎಸ್.ಪವನ್ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.

ವಕೀಲರ ಸಂಘದ ತಾಲೂಕು ಅಧ್ಯಕ್ಷ ಕೆ.ಎನ್.ಕುಮಾರಸ್ವಾಮಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಕೀಲರ ಮೇಲೆ ಸಾರ್ವಜನಿಕರು ಹಾಗೂ ಕಕ್ಷಿದಾರರಿಂದ ಹಲ್ಲೆ ಮತ್ತು ದೌರ್ಜನ್ಯಗಳು ನಡೆಯುತ್ತಿದ್ದು, ವಕೀಲ ಸಮುದಾಯಕ್ಕೆ ಯಾವುದೇ ರಕ್ಷಣೆ ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಘದ ಉಪಾಧ್ಯಕ್ಷ ಜಲೇಂದ್ರಕುಮಾರ್, ಕಾರ್ಯದರ್ಶಿ ಕೆ.ಆರ್.ವಿಶ್ವನಾಥ್, ಖಜಾಂಚಿ ಎಚ್.ನವೀನ್‌ಕುಮಾರ್, ಜಂಟಿ ಕಾರ್ಯದರ್ಶಿ ಎಂ.ಲತಾಮಣಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net