ವಕ್ಫ್ ಕಾಯ್ದೆ ತಿದ್ದುಪಡಿ ಕಳವಳಕಾರಿ

04 KAMPLI 01
Published on

ಕಂಪ್ಲಿ: ಕೇಂದ್ರ ಸರ್ಕಾರ ವಕ್ಫ್ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವುದನ್ನು ವಿರೋಧಿಸಿ ಪಟ್ಟಣದ ನಡುವಲ ಮಸೀದಿ ಆವರಣದಲ್ಲಿ ಮುಸ್ಲಿಮರು ಶುಕ್ರವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಎಸ್.ಶಿವರಾಜಗೆ ಮನವಿ ಸಲ್ಲಿಸಿದರು.

ಶಾಸಕ ಜೆ.ಎನ್.ಗಣೇಶ್ ಮಾತನಾಡಿ, ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧದ ಅಲೆ ದೇಶಾದ್ಯಂತ ಹಬ್ಬಿದೆ. ಸ್ಥಳೀಯ ಮುಸ್ಲಿಮರ ಅಭಿಪ್ರಾಯವನ್ನು ಮುಖ್ಯಮಂತ್ರಿ ಗಮನಕ್ಕೆ ತರುವುದಾಗಿ ತಿಳಿಸಿದರು.

ಮುಸ್ಲಿಂ ಧರ್ಮಗುರು ಸೈಯ್ಯದ್ ಷಾಹ್ ಅಬುಲ್ ಹಸನ್ ಖಾದ್ರಿ, ಅಂಜುಮನ್ ಖಿದ್ಮಾತೆ-ಎ-ಇಸ್ಲಾಂ ಕಮಿಟಿ ತಾಲೂಕು ಅಧ್ಯಕ್ಷ ಕೆ.ಮಸ್ತಾನ್, ಪ್ರಮುಖರಾದ ಎನ್.ಹಬೀಬ್ ರೆಹಮಾನ್, ಯಾಳ್ಪಿ ಅಬ್ದುಲ್ ಮುನಾಫ್ ಹಾಗೂ ಇತರರು ಮಾತನಾಡಿ, ಕೇಂದ್ರ ಸರ್ಕಾರ ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಗಮನಾರ್ಹ ಬದಲಾವಣೆಗೆ ಮುಂದಾಗಿರುವುದು ನಮ್ಮ ಕಳವಳಕ್ಕೆ ಕಾರಣವಾಗಿದೆ ಎಂದರು.

ವಕ್ಫ್ ಕಾಯ್ದೆ ತಿದ್ದುಪಡಿ ದೇಶದ ಸಂವಿಧಾನದ ಮೇಲೆ ನಡೆದಿರುವ ದಾಳಿಯಾಗಿದೆ. ಅಲ್ಪಸಂಖ್ಯಾತರನ್ನು ಅವಮಾನಿಸುವುದು ಹಾಗೂ ನಮ್ಮ ಹಕ್ಕುಗಳನ್ನು ಕಿತ್ತುಕೊಳ್ಳುವುದು ಕೇಂದ್ರ ಸರ್ಕಾರದ ಹುನ್ನಾರವಾಗಿದೆ. ದೇಶದ ಸಮಾಜವನ್ನು ವಿಭಜಿಸುವ ಗುರಿ ಹೊಂದಿರುವ 2025ರ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಬಾರದು ಎಂದು ಒತ್ತಾಯಿಸಿದರು.

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಉಸ್ಮಾನ್, ಪ್ರಮುಖರಾದ ಮೆಹಮೂದ್, ವಾಹೀದ್, ಹಬೀಬ್ ರೆಹಮಾನ್, ವೈ.ಅಬ್ದುಲ್ ಮುನಾಫ್,ಬಿ.ಜಾಫರ್, ಎಂ.ಫಾರೂಖ್, ಶಬ್ಬೀರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net