ವಕ್ಫ್ ಪ್ರಕರಣ ಸಿಬಿಐ ತನಿಖೆಗೆ ವಹಿಸಿ

IMG20241107121355
ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ವಕ್ಫ್ ಬೋರ್ಡ್ ವಿರುದ್ಧ ತಾಲೂಕಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದ ಬಸ್ ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಿದರು.
Published on

ಆಲೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ವಕ್ಫ್ ಬೋರ್ಡ್ ವಿರುದ್ಧ ತಾಲೂಕಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದ ಬಸ್ ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಿದರು.

ಆಲೂರು ಕಟಾಯ ಮಂಡಲದ ಅಧ್ಯಕ್ಷೆ ಉಮಾ ರವಿಪ್ರಕಾಶ್ ಮಾತನಾಡಿ, ಮುಖ್ಯಮಂತ್ರಿ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಭಾಗಿಯಾಗಿರುವ ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳಿಂದ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಸರ್ಕಾರ ವಕ್ಫ್ ಹಗರಣವನ್ನು ಬಯಲಿಗೆ ತಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಲವಾರು ಹಗರಣಗಳು ಬೆಳಕಿಗೆ ಬಂದಿದ್ದು, ಇತ್ತೀಚೆಗಷ್ಟೇ ರೈತರು ಸಾಗುವಳಿ ಮಾಡುತ್ತಿರುವ ಜಮೀನುಗಳಿಗೆ ವಕ್ಫ್ ಬೋರ್ಡ್ ಮೂಲಕ ನೋಟಿಸ್ ಜಾರಿ ಮಾಡಲಾಗುತ್ತಿದೆ. ಕೂಡಲೇ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು. ಜತೆಗೆ ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಹಾಗೂ ವಿವಾದಕ್ಕೆ ಕಾರಣವಾದ ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಮುಖಂಡ ಅಜಿತ್ ಚಿಕ್ಕಕಣಗಾಲು, ಮಾಜಿ ಅಧ್ಯಕ್ಷ ಹುಲ್ಲಹಳ್ಳಿ ನಾಗರಾಜ್ ಮಾತನಾಡಿದರು.

ತಹಸೀೀಲ್ದಾರ್ ನಂದಕುಮಾರ್ ಅವರಿಗೆ ಇದೇ ವೇಳೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ನಗರ ಅಧ್ಯಕ್ಷ ಲೋಹಿತ್, ಎಸ್ಸಿ ಮೋರ್ಚಾ ಅಧ್ಯಕ್ಷ ಬಾಲಲೋಚನ, ಮಹಿಳಾ ಅಧ್ಯಕ್ಷೆ ಸವಿತಾ ಗಣೇಶ, ಕಾರ್ಯದರ್ಶಿ ಸುಶ್ಮಾ, ಹಿರಿಯ ಮುಖಂಡರಾದ ಹಳೇ ಆಲೂರು ರಮೇಶ್, ಕದಾಳು ಲೋಕೇಶ್, ನಂಜುಡುಪ್ಪ, ನವೀನ್ ದಡಿಹಳ್ಳಿ, ಜಿಲ್ಲಾ ರೈತ ಮೋರ್ಚಾ ಹರೀಶ್ ಸೇರಿದಂತೆ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net