ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮಕೈಗೊಳ್ಳಿ

22 MANJU 03
Published on

ಹೊಸಪೇಟೆ: ಕಾಂಗ್ರೆಸ್ ನಾಯಕರಿಂದ ರಾಜ್ಯಪಾಲರಿಗೆ ಮಾಡಿದ ಅವಮಾನ ಖಂಡಿಸಿ ಬಿಜೆಪಿಯಿಂದ ನಗರದ ತಹಸೀಲ್ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಯಿತು.

ಹೂವಿನ ಹಡಗಲಿ ಶಾಸಕ ಕೃಷ್ಣ ನಾಯ್ಕ ಮಾತನಾಡಿ, ಸಚಿವ ಕೃಷ್ಣ ಬೈರೇಗೌಡ ರಾಜ್ಯಪಾಲರನ್ನು ನಾಲಾಯಕ್ ಎಂದು ಕರೆದಿದ್ದಾರೆ. ಗೆಹಲೋತ್ ಅವರನ್ನು ರಾಜಭವನದಿಂದ ಓಡಿಸುವುದಾಗಿ ಐವನ್ ಡಿಸೋಜ ಹೇಳಿದ್ದಾರೆ. ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಪ್ರಧಾನಮಂತ್ರಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಸಚಿವ ಜಮೀರ್ ಹಿಂಸೆಗೆ ಪ್ರಚೋದನೆ ನೀಡುವ ರೀತಿಯಲ್ಲಿ ಮಾತನಾಡಿದ್ದಾರೆ. ಇವರೆಲ್ಲರ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತರಾಗಿ ಪ್ರಕರಣ ದಾಖಲಿಸಬೇಕು ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಮಾತನಾಡಿ, ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ಹುದ್ದೆಯ ಘನತೆಯನ್ನು ಅರಿಯದ ಕಾಂಗ್ರೆಸ್ ನಾಯಕರುಗಳು ಅವರ ವಿರುದ್ಧ ಅವಹೇಳನಕಾರಿಯಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ. ಹಾದಿ ಬೀದಿಯಲ್ಲಿ ಅವರ ಪ್ರತಿಕೃತಿಯನ್ನು ಸುಡುವಂತಹ ಹೀನಕೃತ್ಯಕ್ಕೆ ಇಳಿದಿದ್ದಾರೆ. ಮುಖ್ಯಮಂತ್ರಿಗಳ ಮೇಲೆ ಬಂದ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸುವುದು ರಾಜ್ಯಪಾಲರಿಗೆ ಸಂವಿಧಾನ ನೀಡಿರುವ ಅಧಿಕಾರ. ತಪ್ಪು ಮಾಡಿರುವ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು, ಹಿಂದೆ ಯಡಿಯೂರಪ್ಪ ಅವರ ವಿರುದ್ಧ ಆರೋಪ ಕೇಳಿ ಬಂದಾಗ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಆಗ ವಿರೋಧ ಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ಸರಿಯಾಗಿದೆ ಎಂದಿದ್ದರು. ಈಗ ಅಂಥದ್ದೆ ಸಂದರ್ಭದಲ್ಲಿ ರಾಜ್ಯಪಾಲರ ನಿರ್ಧಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟಿಸುತ್ತಿದೆ. ಇದಕ್ಕೆ ಏನು ಹೇಳುತ್ತೀರಿ ಸಿದ್ದರಾಮಯ್ಯ ಅವರೇ? ಎಂದು ಪ್ರಶ್ನಿಸಿದರು.

ಪ್ರಮುಖರಾದ ಅಯ್ಯಳಿ ತಿಮ್ಮಪ್ಪ, ಬಾಲಹುಣಸಿ ರಾಮಣ್ಣ, ಅಶೋಕ್ ಜೀರೆ, ಕಿಚಡಿ ಕೊಟ್ರೇಶ್, ಓದೊಗಂಗಪ್ಪ, ರೇವಣಸಿದ್ದಪ್ಪ, ಶಂಕರ್ ಮೇಟಿ, ರಾಘವೇಂದ್ರ, ಕಾಸಟ್ಟಿ ಉಮಾಪತಿ, ಸಂಜೀವ್ ರೆಡ್ಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net