

ತೇರದಾಳ: ವಿದ್ಯಾರ್ಥಿಗಳು ಹರಿಯುವ ನೀರಾಗಿ ನಿರಂತರ ಗುರಿಯಡೆಗೆ ಚಲಿಸಿದಾಗ ಮಾತ್ರ ನಮ್ಮೊಳಗಿರುವ ಅಗಾಧ ಶಕ್ತಿ ಹೊರಹೊಮ್ಮಲು ಸಾಧ್ಯ ಎಂದು ಜಮಖಂಡಿಯ ಬಾಗಲಕೋಟೆ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ರಾಧಡಾ ಷಣ್ಮುಖಪ್ಪ ಅಂಗಡಿ ಹೇಳಿದರು.
ಪಟ್ಟಣದ ದಾನಿಗೊಂಡ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬಿಕಾಂ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಂಸ್ಥೆ ಅಧ್ಯಕ್ಷ ಮಹಾವೀರ ದಾನಿಗೊಂಡ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನಲ್ಲಿ ಕಲಿತುಕೊಂಡ ಶಿಕ್ಷಣದೊಂದಿಗಿನ ಅನುಭವವನ್ನು ಉನ್ನತ ಶಿಕ್ಷಣದಲ್ಲಿ ಅಳವಡಿಸಿಕೊಂಡು ನಿಶ್ಚಿತ ಗುರಿ ಸಾಧಿಸುವ ನಿಟ್ಟಿನಲ್ಲಿ ನಿರಂತರವಾಗಿ ಪ್ರಯತ್ನಿಸಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲ ಸಂತೋಷ ಕೃಷ್ಣಾಪುರ ಮಾತನಾಡಿದರು.
ಸಂಸ್ಥೆ ನಿರ್ದೇಶಕ ಡಾ. ಪುಷ್ಪದಂತ ದಾನಿಗೊಂಡ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿದ್ಯಾರ್ಥಿಗಳಾದ ಅಮೃತಾ ಹಂದಿಗುಂದ, ಅಂಕಿತಾ ಕಡಪಟ್ಟಿ, ತೇಜಸ್ವಿನಿ ದಳವಾಯಿ ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಉಪನ್ಯಾಸಕ ವಿಠ್ಠಲ ಮುರಾರಿ, ಪ್ರಕಾಶ ಮಾಳಿ ನಿರೂಪಿಸಿದರು.