ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರ ಉಳಿಯಬೇಕು

27 SARAG 2
Published on

ಸರಗೂರು : ವಿದ್ಯಾರ್ಥಿಗಳು ಮಾದಕ ದ್ರವ್ಯ, ಮಾದಕ ವಸ್ತುಗಳಿಂದ ದೂರ ಉಳಿಯಬೇಕು ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಲಕ್ಷ್ಮೀಕಾಂತ್ ತಿಳಿಸಿದರು.
ಸರಗೂರು ಪೊಲೀಸ್ ಠಾಣೆ ವತಿಯಿಂದ ಬುಧವಾರ ಪಟ್ಟಣದ ವಿವೇಕ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಉತ್ತಮ ಸಮಾಜ ನಿರ್ಮಿಸಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನವಹಿಸಬೇಕು. ಯಾವುದೇ ಕಾರಣಕ್ಕೂ ಮಾದಕ ವ್ಯಸನಿಗಳಾಗಬಾರದು. ಆ ಮೂಲಕ ಮಾದಕ ವಸ್ತುಗಳ ಮುಕ್ತ ಸಮಾಜವನ್ನು ನಿರ್ಮಿಸಬೇಕು ಎಂದು ಸಲಹೆ ನೀಡಿದರು.


ಪ್ರತಿಯೊಬ್ಬರು ಸಂಚಾರ ನಿಯಮವನ್ನು ಪಾಲಿಸಬೇಕು. ಹೆಲ್ಮೆಟ್ ಇಲ್ಲದೆ ಚಾಲನೆ ಮಾಡುವುದು, ಸೀಟ್ ಬೆಲ್ಟ್ ಧರಿಸದೆ ಚಾಲನೆ ಮಾಡುವುದು, ಅಪ್ರಾಪ್ತ ಮಕ್ಕಳ ಕೈಗೆ ವಾಹನ ನೀಡುವುದು, ಟ್ರಿಬಲ್ ರೈಡಿಂಗ್ ಮಾಡುವುದು, ಅತಿ ವೇಗ ಮತ್ತು ವೀಲ್ಹಿಂಗ್ ಮಾಡುವುದು ಅಪರಾಧವಾಗಿದೆ ಎಂದರು. ಇದೇ ವೇಳೆ ಎನ್‌ಸಿಸಿ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.


ಸಿಬ್ಬಂದಿ ಗೋಪಾಲ್, ನಾರಾಯಣ್, ನಾಗನಾಯಕ, ಕೃಷ್ಣಯ್ಯ, ದಿಲೀಪ್, ಗಣಪತಿ, ಶಿವಕುಮಾರ್, ಆನಂದ, ಸೋಮ ನಾಯಕ, ದೇವರಾಜು ಇತರರು ಇದ್ದರು.


ಸರಗೂರು ಪೊಲೀಸ್ ಠಾಣೆಯಿಂದ ಎಂಎಂಕೆ ಕಾಲೇಜು, ಕೆ.ಬೆಳ್ತೂರು ಮುರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ವಿವಿಧೆಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಿರುನಾಟಕ, ಜಾಗೃತಿ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಗ್ಗೆ ಅರಿವು ಮೂಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net