ವಿದ್ಯಾರ್ಥಿಗಳ ಸಾಧನೆ

wwwwwww
Published on

ಧಾರವಾಡ: ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಇಲ್ಲಿನ ಆರ್​.ಎನ್​. ಶೆಟ್ಟಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ನಗರದ ಪ್ರಿಸಮ್​ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
54 ಕೆಜಿ ವಿಭಾಗದಲ್ಲಿ ಶ್ರೇಯಾ ಗೌಡರ ಹಾಗೂ ಪ್ರಜ್ವಲ್​ ಮಠಪತಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ನಿರ್ದೇಶಕ ಶ್ರೀನಿವಾಸ ತಿಮ್ಮನಗೌಡರ, ಕಾರ್ಯದರ್ಶಿ ವೀಣಾ ತಿಮ್ಮನಗೌಡರ, ಪ್ರಾಂಶುಪಾಲ ಎಸ್​.ಎಂ. ಹುಲ್ಲೂರ, ದೈಹಿಕ ಶಿಕ್ಷಣ ಶಿಕ್ಷಕ ವೈ.ಎಂ. ಮಾಸ್ತಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net