

ಧಾರವಾಡ: ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ಸಾಫ್ಟ್ವೇರ್, ನೆಟ್‌ವರ್ಕಿಂಗ್, ಸಂಪರ್ಕ ಮತ್ತು ಆಟೋಮೇಶನ್ ಜೀವನದ ಅವಿಭಾಜ್ಯ ಅಂಗವಾಗಿವೆ ಎಂದು ಟಾಟಾ ಮೋಟರ್ಸ್ನ ಪ್ಲಾಂಟ್ ಹೆಡ್‌ನ ಹಿರಿಯ ಪ್ರಧಾನ ವ್ಯವಸ್ಥಾಪಕ ಅಮಿತವ್ ಸಹಾಯ್ ಹೇಳಿದರು.
ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮತ್ತು ಅಭಿಯಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಇನ್‌ಸಿಗ್ನಿಯಾ: ರಾಷ್ಟಿçÃಯ ಮಟ್ಟದ ತಾಂತ್ರಿಕ- ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಹುಬ್ಬಳ್ಳಿಯ ಕೈಗಾರಿಕೋದ್ಯಮಿ ವಿಜೇಶ್ ಸೈಗಲ್ ಮಾತನಾಡಿ, ವಿದ್ಯಾರ್ಥಿಗಳು ಹೊಸತನವನ್ನು ಅಳವಡಿಸಿಕೊಳ್ಳಬೇಕು. ಇಂದಿನ ದಿನಗಳಲ್ಲಿ ಸ್ಪರ್ಧೆ ಹೆಚ್ಚಾಗಿದ್ದು, ಪ್ರಯತ್ನಶೀಲರಾಗಬೇಕು. ವಿಶಾಲ ದೃಷ್ಟಿಕೋನ ಹೊಂದಿರುವ ಉದ್ಯಮಿ ಇಂದಿನ ಅಗತ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂಇ ಸೊಸೈಟಿ ಕಾರ್ಯದರ್ಶಿ ಜೀವಂಧರ್‌ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಎಸ್‌ಡಿಎಂ ಸಂಸ್ಥೆಯ ಉನ್ನತ ಆದರ್ಶಗಳನ್ನು ಅನುಸರಿಸಿರಬೇಕು. ಸ್ವಯಂ ಶಿಸ್ತನ್ನು ಕಾಪಾಡಿಕೊಳ್ಳಬೇಕು ಎಂದರು.
ಪ್ರಾಚಾರ್ಯ ಡಾ. ಕೆ. ಗೋಪಿನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸೌಮ್ಯಾ ಪ್ರಾರ್ಥಿಸಿದರು. ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಪ್ರೊ. ವಿ.ಕೆ. ಪರ್ವತಿ ವಂದಿಸಿದರು.