

ಚಿಕ್ಕೋಡಿ: ವಿದ್ಯಾರ್ಥಿಗಳು ಕೇಂದ್ರೀಕೃತ ಮನಸ್ಸಿನಿಂದ ಬದುಕಬೇಕೆಂದು ಸ್ವಾಮಿ ಮೋಕ್ಷಾತ್ಮಾನಂದಜೀ ಮಹಾರಾಜರು ಹೇಳಿದರು.
ಪಟ್ಟಣದ ಕೆಎಲ್‌ಇ ಸಂಸ್ಥೆಯ ಚಿದಾನಂದ ಬಿ. ಕೋರೆ ಪಾಲಿಟೆಕ್ನಿಕ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಭವಿಷ್ಯದ ಹಾದಿ ಎಂಬ ವಿಷಯದ ಕುರಿತ ಉಪನ್ಯಾಸ ಹಾಗೂ ಸ್ವಾಗತ ಸಮಾರಂಭದಲ್ಲಿ ಮಾತನಾಡಿ, ವರ್ತಮಾನದಲ್ಲಿ ಬದುಕುವುದನ್ನು ಕಲಿಯಿರಿ ಎಂಬ ಸಂದೇಶ ನುಡಿದರು.
ಸಂಸ್ಥೆಯ ಪ್ರಾಚಾರ್ಯ ಡಾ.ದರ್ಶನಕುಮಾರ ಬಿಳ್ಳೂರ ಮಾತನಾಡಿ, ಆಧ್ಯಾತ್ಮಿಕ ಮತ್ತು ಪ್ರೇರಣಾದಾಯಕ ಉಪನ್ಯಾಸಗಳು ವಿದ್ಯಾರ್ಥಿಗಳ ಜೀವನಕ್ಕೆ ದಾರಿ ತೋರಿಸಲು ಸಹಾಯ ಮಾಡುತ್ತವೆ ಎಂದರು.
ಉಪನ್ಯಾಸಕರು, ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.