ವರ್ಷದ ಅಂತ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಿ.ಆರ್ ಸುದರ್ಶನ್

ವರ್ಷದ ಅಂತ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಿ.ಆರ್ ಸುದರ್ಶನ್
Published on

ಸ್ಥಳೀಯ ಸಂಸ್ಥೆಗಳ ಚುನಾವಣೆ ಹಲವು ವರ್ಷಗಳಿಂದ ನಡೆದಿಲ್ಲ. ಇದಕ್ಕೆ ನಮ್ಮ ಸರ್ಕಾರ ಕಾರಣವಲ್ಲ, ಈ ಹಿಂದೆ ಆಡಳಿತ ನಡೆಸಿದ ಸರ್ಕಾರ ಕಾರಣ ಆದರೂ ಸಹ ಈ ವರ್ಷದ ಅಂತ್ಯದ ಒಳಗೆ ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯನ್ನು ನಡೆಸಲಾಗುವುದು ಎಂದು ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್‌ನ ಸತ್ಯ ಶೋಧನಾ ಸಮಿತಿಯ ಅಧ್ಯಕ್ಷ ಬಿ.ಆರ್ ಸುದರ್ಶನ್ ಹೇಳಿದರು
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಈ ಹಿಂದಿನ ಸರ್ಕಾರ ಕಮಿಟಿ ರಚನೆ ಮಾಡಿ, ಕ್ಷೇತ್ರ ಪುನರ್ ವಿಂಗಡಿ ಸಂಬಂಧ ಕೋರ್ಟಿನಲ್ಲಿದ್ದು, ಅವುಗಳನ್ನ ನಿವಾರಣೆ ಮಾಡಿ, ಈ ವರ್ಷದ ನವಂಬರ್ ಅಥವಾ ಡಿಸೆಂಬರ್ ಒಳಗೆ ಚುನಾವಣೆ ನಡೆಸಲಾಗುವುದು ಎಂದರು.
ಕೆಪಿಸಿಸಿ ಆದೇಶದ ಮೇರೆಗೆ ಸತ್ಯಶೋಧನಾ ಸಮಿತಿ ಮೈಸೂರು ಭಾಗದ ಎಲ್ಲಾ ಜಿಲ್ಲೆಗಳ ಪ್ರವಾಸ ಮಾಡಿ ಅಲ್ಲಿಯ ಮುಖಂಡರು ಮತ್ತು ಕಾರ್ಯಕರ್ತರ ಹಾಗೂ ವಿವಿಧ ಪದಾಧಿಕಾರಿಗಳ ಅಭಿಪ್ರಾಯ ಮತ್ತು ಸಲಹೆ ಸೂಚನೆಗಳನ್ನು ಸಂಗ್ರಹಿಸಿ ಅದನ್ನ ಕೆಪಿಸಿಸಿಗೆ ವರದಿ ಸಲ್ಲಿಸಲಾಗುವುದು ಆನಂತರ ಆ ವರದಿಯನ್ನ ಎಸಿಸಿಗೆ ಕಳಿಸಲಾಗುವುದು ಎಂದು ಹೇಳಿದರು.
ನಮ್ಮ ಪಕ್ಷ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಕೂಡ ನಿಗಮ ಮಂಡಳಿಯ ನಾಮನಿರ್ದೇಶನ ಸ್ಥಾನಕ್ಕೆ ಮತ್ತು ಹುಡಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ವಿಳಂಬವಾಗಿದ್ದು, ಇದು ಕಾರ್ಯಕರ್ತರ ಅಭಿಪ್ರಾಯ ಕೂಡ ಆಗಿದೆ.ಶೀಘ್ರದಲ್ಲೇ ಸಂಬಂಧ ಪಟ್ಟ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಅವುಗಳ ನೇಮಕ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿ ವರಿಷ್ಠರ ಜೊತೆ ಮಾತುಕತೆ ನಡೆಸಿದ್ದಾರೆ ಇದು ಸರ್ವೇಸಾಮಾನ್ಯ ದೇಶದ ಎಲ್ಲ ರಾಜ್ಯಗಳ ಅಧ್ಯಕ್ಷರು ಮತ್ತು ನಮ್ಮ ಸರ್ಕಾರ ಆಡಳಿತದಲ್ಲಿರುವಂತಹ ಮುಖ್ಯಮಂತ್ರಿಗಳ ಸಭೆಯಲ್ಲಿ ಇವರು ಭಾಗವಹಿಸಿದ್ದಾರೆ ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ,ಮಾಜಿ ಶಾಸಕರಾದ ಅಂಜಲಿ ನಿಂಬಾಲ್ಕರ್, ರಘುಮೂರ್ತಿ, ವೆಂಕಟರೆಡ್ಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net