

ಮದ್ದೂರು: ತಾಲೂಕಿನ ವಳೆಗೆರೆಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಹಳೇ ವಿದ್ಯಾರ್ಥಿಗಳಿಂದ ಶನಿವಾರ ಗುರುವಂದನಾ ಕಾರ್ಯಕ್ರಮ ನಡೆಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಕಾಳೀರಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕತ್ತಲೆಯಿಂದ ಬೆಳಕಿನೆಡೆಗೆ ಮಾರ್ಗತೋರುವವರು ಗುರುಗಳು ಸದಾ ಸ್ಮರಣೀಯರು ಎಂದರು.
ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಪ್ರಮುಖ ಕಾರಣರಾದ ಶಿಕ್ಷಕರನ್ನು ನೆನಪಿಸಿಕೊಂಡು ಅವರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಶಾಲೆಯ ಹಿರಿಯ ವಿದ್ಯಾರ್ಥಿಗಳ ಕಾರ್ಯ ಮಾದರಿ ಎಂದರು. ಹಿರಿಯ ಶಿಕ್ಷಕರಾದ ಸಿದ್ದರಾಮೇಗೌಡ, ಶಿವಶಂಕರ, ನಾರಾಯಣ, ಕಾಡಯ್ಯ, ಚನ್ನಬಸವ ಶೆಟ್ಟಿ ಇತರರನ್ನು ಹಳೇ ವಿದ್ಯಾರ್ಥಿಗಳು ಗೌರವಿಸಿದರು. ಗ್ರಾ.ಪಂ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷ ದಯಾನಂದ, ತಾ.ಪಂ.ಮಾಜಿ ಸದಸ್ಯ ಚಿಕ್ಕಮರಿಯಪ್ಪ ಹಾಜರಿದ್ದರು.