ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

application
Published on

ಶ್ರೀರಾಮಪುರಪಟ್ಟಣ ಪಂಚಾಯಿತಿಯಲ್ಲಿ ಶೇ.24.10 ರಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪೌರಕಾರ್ಮಿಕರಿಗೆ ಶೇ.7.25 ರಡಿ ಇತರೆ ಬಡಜನರಿಗೆ ಮತ್ತು ಶೇ.5 ರ ಯೋಜನೆಯಡಿ ವಿಶೇಷ ಚೇತನ ಬಡಜನರ ಕಲ್ಯಾಣಕ್ಕಾಗಿ ವಿವಿಧ ವೈಯಕ್ತಿಕ ಸೌಲಭ್ಯವನ್ನು ಕಲ್ಪಿಸಲು ಅರ್ಜಿಯನ್ನು ಅಹ್ವಾನಿಸಲಾಗಿದೆ.

ವಿವಿಧ ಯೋಜನೆಯಡಿಯಲ್ಲಿ ಆಯ್ಕೆಯಾದ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ 48.000, ಪರಿಶಿಷ್ಟ ವರ್ಗದ ಫಲಾನುಭವಿಗಳಿಗೆ 18.000, ಪೌರಕಾರ್ಮಿಕರ ಕುಟುಂಬಗಳಿಗೆ ವೈದ್ಯಕೀಯ ವೆಚ್ಚ ಮರುಪಾವತಿ/ ಕ್ರೀಡಾ ಪ್ರೋತ್ಸಾಹಧನಕ್ಕೆ 1.11.000, ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ 24.000, ವಿಕಲಚೇತನರ ಕುಟುಂಬದವರಿಗೆ ಶೌಚಾಲಯ ನಿರ್ಮಾಣಕ್ಕೆ -20.000 ರೂಗಳನ್ನು ವಿವಿಧ ಯೋಜನೆಗಳ ಮೂಲಕ ನೀಡಲಾಗುತ್ತಿದ್ದು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನಾಂಕವಾಗಿದ್ದು, ಸಂಬoಧಿತ ದಾಖಲೆಗಳೊಂದಿಗೆ ಪಟ್ಟಣ ಪಂಚಾಯಿತಿ ಕಾರ್ಯಲಯಕ್ಕೆ ಸಲ್ಲಿಸುವಂತೆ ತಿಳಿಸಿಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯದಲ್ಲಿ ಯೋಜನಾ ಶಾಖೆಯನ್ನು ಸಂಪರ್ಕಿಸುವoತೆ ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net