ವಸತಿ ಕಾಮಗಾರಿ ಕಳಪೆಗೆ ಆಕ್ರೋಶ

Bheem
Published on

ಚಿತ್ರದುರ್ಗ: ರಾಜ್ಯ ಕೊಳೆಗೇರಿ ಅಭಿವೃದ್ಧಿ ಮಂಡಳಿ ದಾವಣಗೆರೆ ಉಪವಿಭಾಗದಿಂದ ಚಿತ್ರದುರ್ಗದಲ್ಲಿ ನಿರ್ಮಿಸುತ್ತಿರುವ 1,500 ಹೆಚ್ಚು ಮನೆಗಳ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಭೀಮ್ ಆರ್ಮಿ ಭಾರತ್ ಏಕತಾ ಮಿಷನ್‌ನ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಕಳಪೆ ಕಾಮಗಾರಿ ಕುರಿತು ತನಿಖೆ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.

ವಸತಿ ಸೌಕರ್ಯ ಕಾಮಗಾರಿಯಲ್ಲಿ ಸರ್ಕಾರದ ನಿಯಮ ಪಾಲಿಸದೆ, ಗುತ್ತಿಗೆದಾರರು ಬೇಕಾಬಿಟ್ಟಿಯಾಗಿ ನಿರ್ಮಿಸುತ್ತಿದ್ದಾರೆ. ಇಂಜಿನಿಯರ್ ಯಾರೆಂಬುದು ಈವರೆಗೂ ಗೊತ್ತಾಗಿಲ್ಲ. ಕ್ಯೂರಿಂಗ್‌ಗೆ ನೀರಿನ ಸೌಕರ್ಯ ಲಭ್ಯವಿಲ್ಲ. ಪ್ರಶ್ನಿಸಲು ಗುತ್ತಿಗೆದಾರರೇ ಸಿಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಅರ್ಹ ಕೆಲವರಿಗೆ ಮಾತ್ರ ಹಕ್ಕುಪತ್ರ ನೀಡಲಾಗಿದೆ. ಉಳಿದವರಿಗೆ ಇನ್ನೂ ಸಿಕ್ಕಿಲ್ಲ. ಡಿ. 9ರೊಳಗೆ ಎಲ್ಲಾ ನ್ಯಾಯಯುತ ಬೇಡಿಕೆ ಈಡೇರದಿದ್ದರೆ, ದಾವಣಗೆರೆ ಉಪವಿಭಾಗ ಕಚೇರಿವರೆಗೂ ಪಾದಯಾತ್ರೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಮಿಷನ್‌ನ ಜಿಲ್ಲಾ ಅಧ್ಯಕ್ಷ ಎಸ್.ಹನುಮಂತರಾಯ, ಎಲ್.ಅವಿನಾಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net