ವಸತಿ ನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

20-07-Shiva-2
ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪರಶುರಾಮ ಅರೋಲಿ, ಪದಾಕಾರಿಗಳಾದ ವೆಂಕಟೇಶ ಅರಗೋಲ್, ನಶಾಂತಕುಮಾರ, ಚನ್ನಬಸವ ಮಾಡಗಿರಿ, ಸಂತೋಷ, ರವಿಚಂದ್ರ, ದೇವರಾಜ ಇದ್ದರು.
Published on

ರಾಯಚೂರು: ನಗರದಲ್ಲಿನ ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಸತಿ ನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಮತ್ತು ರಕ್ಷಣೆ ನೀಡುವಲ್ಲಿ ನಿರ್ಲಕ್ಷ ವಹಿಸಿದ ಅಕಾರಿಗಳನ್ನು ಸೇವೆಯಿಂದ ಅಮಾನತ್ತುಗೊಳಿಸಬೇಕು ಎಂದು ಒತ್ತಾಯಿಸಿದರು.
ವಸತಿ ನಿಲಯದಲ್ಲಿ ನೀರಿನ ಸಮಸ್ಯೆಯಿಂದ್ದು, ವಿದ್ಯಾರ್ಥಿಗಳು ಸ್ನಾನ ಮತ್ತು ಶೌಚಾಲಯಕ್ಕೆ ಹೋಗಲು ಸಮಸ್ಯೆ ಎದುರಿಸುವಂತಾಗಿದೆ. ಕಳಪೆ ಗುಣಮಟ್ಟದ ಪೌಷ್ಠಿಕಾಂಶ ಇಲ್ಲದ ಊಟವನ್ನು ನೀಡಲಾಗುತ್ತಿದ್ದು, ನಿಗದಿಯಂತೆ ಅಡುಗೆ ಮಾಡಲಾಗುತ್ತಿಲ್ಲ.
ವಸತಿ ನಿಲಯದಲ್ಲಿನ ನೀರಿನ ಸಮಸ್ಯೆ ಬಗೆಹರಿಸಬೇಕು. ಬಿಸಿ ನೀರಿಗೆ ಸೋಲಾರ್ ವ್ಯವಸ್ಥೆ ಮಾಡಬೇಕು. ಗ್ರಂಥಾಲಯ ಸೌಲಭ್ಯ ಕಲ್ಪಿಸಬೇಕು. ಕಟ್ಟಡದ ಸುತ್ತಲ ಪ್ರದೇಶವನ್ನು ಸ್ವಚ್ಛಗೊಳಿಸಬೇಕು. ವಿದ್ಯಾರ್ಥಿಗಳಿಗೆ ಮಲಗಲು ಮಂಚ, ಸೊಳ್ಳೆ ಪರದೆ ವಿತರಣೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪರಶುರಾಮ ಅರೋಲಿ, ಪದಾಕಾರಿಗಳಾದ ವೆಂಕಟೇಶ ಅರಗೋಲ್, ನಶಾಂತಕುಮಾರ, ಚನ್ನಬಸವ ಮಾಡಗಿರಿ, ಸಂತೋಷ, ರವಿಚಂದ್ರ, ದೇವರಾಜ, ಬಸವರಾಜ, ಪ್ರದೀಪ್ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net