ವಸತಿ ನಿಲಯಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ

3 HBD 1
ಹುಮನಾಬಾದ್ ತಾಲೂಕಿನ ಹುಡುಗಿ ಸಮೀಪದ ಜನತಾನಗರ ಕಾಲನಿಯ ಕಸ್ತೂರಬಾ ಗಾಂಧಿ ವಸತಿ ಶಾಲೆಗೆ ಗುರುವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿತು. ಸದಸ್ಯ ಡಾ.ತಿಪ್ಪೇಸ್ವಾಮಿ, ತಾಪಂ ಇಒ ದೀಪಿಕಾ ನಾಯ್ಕರ್ ಇತರರಿದ್ದರು.
Published on

ಹುಮನಾಬಾದ್: ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದೊರೆಯಬೇಕಾದ ಸೌಲಭ್ಯ ಒದಗಿಸುವುದರ ಜತೆಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅಗತ್ಯ ಕ್ರಮ ವಹಿಸಬೇಕೆಂದು ರಾಜ್ಯಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಶಶಿಧರ ಕೋಸಂಬೆ ಹೇಳಿದರು.

ಪಟ್ಟಣದ ಹೊರವಲಯದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ವಸತಿ ನಿಲಯದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳಿಗೆ ಧ್ಯೆರ್ಯ ತುಂಬುವ ಜತೆಗೆ ಪ್ರೀತಿಯಿಂದ ಕಾಣಬೇಕು ಗುಣಮಟ್ಟದ ಆಹಾರ ಕೋಡಬೇಕು. ರಾಷ್ಟ್ರೀಯ ಹೆದ್ದಾರಿಯಿಂದ ವಸತಿ ನಿಲಯಕ್ಕೆ ಬರುವ ರಸ್ತೆ ಸಂಪೂರ್ಣ ಕೆಟ್ಟಿದ್ದು ಒಡಾಡಲು ಬಾರದಂತಾಗಿದ್ದು, ಕೂಡಲೇ ರಸ್ತೆ ಅಭಿವೃದ್ಧಿ ಪಡಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮೀನಾಕುಮಾರಿ ಬೋರಾಳಕರ ಅವರಿಗೆ ಸೂಚನೆ ನೀಡಿದರು.

ಜನತಾ ನಗರರ ಕಸ್ತರಬಾ ಗಾಂಧಿ ಬಾಲಕಿಯರ ವಸತಿ ನಿಲಯಕ್ಕೂ ಭೇಟಿ ನೀಡಿ ಪರಿಶೀಲಿಸಿ ನಿಲಯದಲ್ಲಿ ಬಂದ್ ಆಗಿರುವ ಶುದ್ಧ ಕುಡಿಯುವ ನೀರಿನ ಘಟಕ ತಕ್ಷಣ ರಿಪೇರಿ ಮಾಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ, ಸಿಪಿಐ ಗುರು ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಿಂಗರಾಜ್ ಅರಸ, ಸಿಡಿಪಿಒ ಶಿವಪ್ರಕಾಶ ಹಿರೇಮಠ, ಬಿಇಒ ವೆಂಕಟೇಶ ಗೂಡಾಳ, ಕಾರ್ಮಿಕ ಅಧಿಕಾರಿ ಗಂಗಾಧರ, ಹಿಂದುಳಿದ ವರ್ಗಗಳ ಅಧಿಕಾರಿ ವಿಠಲ್, ಅಲ್ಪಸಂಖ್ಯಾತರ ಅಧಿಕಾರಿ ಶಿವಕುಮಾರ, ಕಂದಾಯ ನಿರೀಕ್ಷಕ ರಾಹುಲ್ ಇತರತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net