

ಚಿತ್ರದುರ್ಗ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದ ವಿವಿಧ ವಸತಿ ಶಾಲೆಗಳ 6 ನೇ ತರಗತಿ ಪ್ರವೇ ಶಕ್ಕಾಗಿ ಫೆ.15 ರಂದು ಜಿಲ್ಲಾದ್ಯಂತ ನಡೆಯಲಿರುವ ಪ್ರವೇಶ ಪರೀಕ್ಷೆಯಲ್ಲಿ ಯಾವುದೇ ಲೋಪಗಳಾಗಬಾರದೆಂದು ಎಡಿಸಿ ಬಿ.ಟಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಡಿಸಿ ಕಚೇರಿಯಲ್ಲಿ ಗುರುವಾರ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಮುರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾ ರ್, ಸಂಗೊಳ್ಳಿ ರಾಯಣ್ಣ, ಕವಿರನ್ನ, ಗಾಂಧಿ ತತ್ವ, ಶ್ರೀ ನಾರಾಯಣಗುರು ಮತ್ತಿತರ ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪ ರೀಕ್ಷಾ ಪ್ರಾಧಿಕಾರ ಅಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಜಿಲ್ಲೆಯ 20 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಿದ್ದು, 7317 ನೋಂದಾಯಿಸಿದ್ದಾರೆ ಎಂದರು.
ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡದಂತೆ, ಪರೀಕ್ಷಾ ಪಾವಿತ್ರ್ಯ ಕಾಪಾಡಬೇಕು. ಪರೀಕ್ಷಾ ಕೇಂದ್ರಗಳಿಗೆ ನಿಗದಿತ ವೇಳೆಯೊಳಗೆ ಪ್ರಶ್ನೆಪತ್ರಿಕೆ ತಲುಪಿಸಬೇಕು. ಪರೀಕ್ಷೆ ಬಳಿಕ ಸುರಕ್ಷಿತವಾಗಿ ನಿಗದಿತ ಸ್ಥಳಕ್ಕೆ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನಕ್ಕಾಗಿ ತಲುಪಿಸಬೇಕು.
ಪರೀಕ್ಷೆ ದಿನದಂದು ಕೇಂದ್ರಗಳ ಸುತ್ತ 200 ಮೀ.ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋ ಬಸ್ತ್ ಕೈಗೊಳ್ಳಬೇಕು. ಕೇಂದ್ರದೊಳಗೆ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು, ವಿದ್ಯಾರ್ಥಿಗಳು ಕೇಂದ್ರ ಪ್ರವೇಶ ಸಂದರ್ಭ ತಪಾಸಣೆ ನಡೆಸಬೇಕೆಂದರು.
ಪಿಯು ಡಿಡಿ ಆರ್.ಪುಟ್ಟಸ್ವಾಮಿ ಮಾತನಾಡಿ, ಚಳ್ಳಕೆರೆ ತಾಲೂಕಿನಲ್ಲಿ 5 ಪರೀಕ್ಷಾ ಕೇಂದ್ರಗಳಲ್ಲಿ 1919 ವಿದ್ಯಾರ್ಥಿಗಳು. ಚಿತ್ರದುರ್ಗ- 2-915, ಹಿರಿಯೂರು-3-1341, ಹೊಳಲ್ಕೆರೆ-2-591, ಹೊಸದುರ್ಗ-4-1297 ವಿದ್ಯಾರ್ಥಿಗಳು ಹಾಗೂ ಮೊಳಕಾಲ್ಮೂರು ತಾ ಲೂಕಿನ 4 ಪರೀಕ್ಷಾ ಕೇಂದ್ರಗಳಲ್ಲಿ 1254 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರಶ್ನೆಪತ್ರಿಕೆ ತಲುಪಿಸಲು ಹಾಗೂ ಉತ್ತರ ಪತ್ರಿಕೆ ಸ್ವೀ ಕರಿಸಲು 21 ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರರು, ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಉಪನ್ಯಾಸಕರು, ಪ್ರಾಂಶುಪಾಲರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.