ವಸತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

10.npk-4
Published on

ನಾಪೋಕ್ಲು: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಡಿಕೇರಿ, ಕೊಡಗು ಜಿಲ್ಲೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ನಾಪೋಕ್ಲು ಸಂಯುಕ್ತಾಶ್ರಯದಲ್ಲಿ ಚೆರಿಯಪರಂಬು ಆಟದ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಪ್ರಾಥಮಿಕ ವಿಭಾಗದ ಬಾಲಕರ ಖೋಖೋ ಪ್ರಥಮ ಸ್ಥಾನ, ಕಬಡ್ಡಿ ದ್ವಿತೀಯ ಸ್ಥಾನ, ಪ್ರಾಥಮಿಕ ವಿಭಾಗದ ಬಾಲಕಿಯರ ವಿಭಾಗದ ಖೋಖೋ ಪ್ರಥಮ ಸ್ಥಾನ, ಪ್ರೌಢ ಬಾಲಕರ ವಿಭಾಗದ ಖೋಖೋ ಪ್ರಥಮ ಸ್ಥಾನ, ಪ್ರೌಢ ವಿಭಾಗದ ಬಾಲಕಿಯರ ಖೋಖೋ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಶಾಲಾ ಪ್ರಾಂಶುಪಾಲೆ ಕೆ.ಡಿ ನೀತಾ ಅವರ ಮಾರ್ಗದರ್ಶನ ದೈಹಿಕ ಶಿಕ್ಷಣ ಶಿಕ್ಷಕಿ ಶ್ಯಾಮಿಲಿ ತರಬೇತಿ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net