

ಚಿತ್ರದುರ್ಗ:ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ‘ಸೂರಿಗಾಗಿ ಸಮರ’ ಅಂದೋಲನದಡಿ ನಗರಸಭೆ ಎದುರು ಸೋಮವಾರ ಪ್ರತಿಭಟನೆ ನಡೆಸಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗೆ ಮನವಿ ಸಲ್ಲಿಸಿದರು.
ಪಕ್ಷದ ಕಚೇರಿಯಿಂದ ನಗರಸಭೆ ವರೆಗೆ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ಬಡವರಿಗೆ ವಸತಿ ಸೌಲಭ್ಯ ಕಲ್ಪಿಸದ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.
ಪಕ್ಷದ ಜಿಲ್ಲಾ ಕಾರ್ಯದರ್ಶಿ ಜಿ.ಸಿ. ಸುರೇಶ್‌ಬಾಬು ಮಾತನಾಡಿ, ನಿವೇಶನ, ಮನೆಗಳಿಲ್ಲದ ಬಡವರು ನಗರದ ಬಾಡಿಗೆ ಮನೆಗಳಲ್ಲಿ ವಾಸಿಸುವುದು ಕಷ್ಟವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ವಸತಿಗಾಗಿ ಹೋರಾಟ ನಡೆಸಿದ ಪ್ರತಿಫಲವಾಗಿ ರಾಜ್ಯದ ಪ್ರತಿ ಹಳ್ಳಿಗಳಲ್ಲೂ ಸರ್ವೆ ನಡೆಸಿ ನಿವೇಶನ, ಮನೆ ಇಲ್ಲದವರನ್ನು ಗುರುತಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಇದು ನಮ್ಮ ಹೋರಾಟದ ಫಲ ಎಂದರು.
ಟಿ.ಆರ್. ಉಮಾಪತಿ, ಇ. ಸತ್ಯಕೀರ್ತಿ, ಜಯದೇವಮೂರ್ತಿ, ಪರ್ವಿನ್‌ತಾಜ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.