

ಸಂಡೂರು: ಡಿಆರ್‌ಎಫ್‌ಒಗಳಿಗೆ ಅತ್ಯಾಧುನಿಕ ರೀತಿಯಲ್ಲಿ ವಸತಿಗೃಹ ನಿರ್ಮಿಸಲಾಗಿದೆ. ಇದರಿಂದ ಅರಣ್ಯ ಅಧಿಕಾರಿಗಳಿಗೆ ಅನುಕೂಲವಾಗಲಿದೆ ಎಂದು ಶಾಸಕಿ ಅನ್ನಪೂರ್ಣ ತುಕಾರಾಮ್ ಹೇಳಿದರು.
ಪಟ್ಟಣದಲ್ಲಿ ಅರಣ್ಯ ಇಲಾಖೆ ಕಚೇರಿ ಬಳಿ ಕಾಂಪಾ ಯೋಜನೆಯಡಿ 60 ಲಕ್ಷ ವೆಚ್ಚದಲ್ಲಿ ಡಿಆರ್‌ಎಫ್‌ಒಗಳ 4 ವಸತಿಗೃಹ, ಆರ್‌ಎಫ್‌ಒ ಕಚೇರಿ ನವೀಕೃತ ಕಟ್ಟಡದ ಉದ್ಘಾಟನೆ ಹಾಗೂ ಎನ್‌ಎಂಡಿಸಿ ಸಿಎಸ್‌ಆರ್ ಯೋಜನೆಯಡಿ 2.05 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಸಂಕೀರ್ಣ, ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಸೋಮವಾರ ಮಾತನಾಡಿದರು.
ವಲಯ ಅರಣ್ಯಾಧಿಕಾರಿ ಸೈಯದ್ ದಾದಾ ಖಲಂದರ್, ತಹಸೀಲ್ದಾರ್ ಅನಿಲ್ ಕುಮಾರ್, ತಾಪಂ ಇಒ ಎಸ್.ಷಡಕ್ಷರಯ್ಯ, ಪುರಸಭೆ ಅಧ್ಯಕ್ಷ ಎಸ್.ಸಿರಾಜ್ ಹುಸೇನ್, ಪ್ರಾಕೃಪಸಸಂ ಅಧ್ಯಕ್ಷ ಜಿ.ಗಾಣಿಗರ ವೀರೇಶ್, ಉಪಾಧ್ಯಕ್ಷ ಕೆ.ಯರ‌್ರಿಸ್ವಾಮಿ, ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷೆ ಆಶಾಲತಾ ಸೋಮಪ್ಪ, ಪುರಸಭೆ ಉಪಾಧ್ಯಕ್ಷೆ ಎಂ.ಸಿ.ಲತಾ ಉಜ್ಜಪ್ಪ, ಆದಿನಾರಾಯಣ ಇತರರಿದ್ದರು.