ವಸಸಂಹಿತೆ ಆದೇಶ ಪಾಲನೆ ಕಡ್ಡಾಯ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚನೆ, ಕಾಲೇಜಿನಲ್ಲಿ ಅಭಿವೃದ್ಧಿ ಸಮಿತಿಯೊಂದಿಗೆ ಸಭೆ

dc must
Published on

ವಿಜಯಪುರ: ಹೈಕೋರ್ಟ್ ಮಧ್ಯಂತರ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದ ಹಿನ್ನೆಲೆಯಲ್ಲಿ ಶುಕ್ರವಾರ ಕಾಲೇಜಿನ ಅಭಿವೃದ್ಧಿ ಸಮಿತಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.

ವಿದ್ಯಾರ್ಥಿನಿಯರು ಮೊದಲು ಸಮವಸ್ತ್ರ ಹಾಕುತ್ತಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ 2 ವರ್ಷದ ಹಿಂದೆ ಕೋವಿಡ್ ಸಮಯದಲ್ಲಿ ಸಮವಸ್ತ್ರ ಕಡ್ಡಾಯವಲ್ಲ ಎಂದು ನಡಾವಳಿ ಮಾಡಿಕೊಂಡು ರದ್ದುಪಡಿಸಿದ್ದಾಗಿ ತಿಳಿಸಿದೆ. ಪ್ರಸ್ತುತ ಸಮವಸ್ತ್ರ ಧರಿಸುವುದು ಚಾಲ್ತಿಯಲ್ಲಿ ಇಲ್ಲದ ಕಾರಣ ಕೋರ್ಟ್ ಮಧ್ಯಂತರ ಆದೇಶ ಅನ್ವಯಿಸುವುದಿಲ್ಲ ಎಂದರು.

ವಸ್ತ್ರಸಂಹಿತೆ ಇರುವ ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಕೋರ್ಟ್ ಆದೇಶ ಪಾಲಿಸಬೇಕು, ಕಾಲೇಜಿಗೆ ಬಂದಾಗ ಹಿಜಾಬ್ ತೆಗೆದು ತರಗತಿಗೆ ಹೋಗಲಿಕ್ಕೆ ಅವಶ್ಯವಿರುವ ಕೊಠಡಿ ಸಿದ್ಧಪಡಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.

ಪ್ರಾಂಶುಪಾಲರ ಮಾಹಿತಿ: 101 ಅಲ್ಪಸಂಖ್ಯಾತ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಅವರಲ್ಲಿ 60 ವಿದ್ಯಾರ್ಥಿನಿಯರಿದ್ದಾರೆ. ಶುಕ್ರವಾರ 40 ವಿದ್ಯಾರ್ಥಿನಿಯರು ಕಾಲೇಜಿಗೆ ಹಾಜರಾಗಿದ್ದು, 5 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದರು ಎಂದು ಪ್ರಭಾರ ಪ್ರಾಂಶುಪಾಲ ಗೋಪಾಲಯ್ಯ ಡಿಸಿಗೆ ಮಾಹಿತಿ ನೀಡಿದರು.

ಸಮವಸ ಕಡ್ಡಾಯವಲ್ಲ: ಸರ್ಕಾರಿ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ಆದರೂ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಹೊರಗೆ ಸುತ್ತಾಡುವಾಗ ಗುರುತು ಸಿಗಬೇಕು ಎನ್ನುವ ಕಾರಣಕ್ಕೆ ನಾವೇ ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡಿದ್ದೆವು. ಕರೊನಾ ಬಳಿಕ ಸಮವಸ್ತ್ರ ಕಡ್ಡಾಯಗೊಳಿಸಿಲ್ಲ. ಈಗ ಯಾರೂ ಸಮವಸ್ತ್ರ ಧರಿಸಿಕೊಂಡು ಬರುತ್ತಿಲ್ಲ. ಆದ್ದರಿಂದ ಕಾಲೇಜಿನಲ್ಲಿ ಮೊದಲಿನಿಂದಲೂ ವಿದ್ಯಾರ್ಥಿಗಳು ಹೇಗೆ ಬರುತ್ತಾರೋ ಹಾಗೇ ನಡೆದುಕೊಳ್ಳಲಿದ್ದಾರೆ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎನ್.ನಾರಾಯಣಸ್ವಾಮಿ ಹೇಳಿದರು.

ವೇದಿಕೆ ಸದಸ್ಯರ ಎಚ್ಚರಿಕೆ: ದೇವನಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ತರಗತಿಗಳಲ್ಲಿ ಪಾಠ ಕೇಳುತ್ತಿದ್ದರೂ ಕಾಲೇಜಿನ ಅಭಿವೃದ್ಧಿ ಸಮಿತಿ ಹಾಗೂ ಕಾಲೇಜಿನ ಸಿಬ್ಬಂದಿ ಇದಕ್ಕೆ ಅವಕಾಶ ನೀಡಿರುವುದನ್ನು ಖಂಡಿಸುತ್ತೇವೆ. ಕಾಲೇಜಿನಲ್ಲಿ ಕೋರ್ಟ್ ಆದೇಶ ಉಲ್ಲಂಘನೆಯಾಗುತ್ತಿದೆ ಎಂದು ಹಿಂದು ಜಾಗರಣಾ ವೇದಿಕೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾಲೇಜಿಗೆ ಭೇಟಿ ನೀಡಿದ್ದರು.

ತಹಸೀಲ್ದಾರ್ ಶಿವರಾಜ್, ಪುರಸಭೆ ಮುಖ್ಯಾಧಿಕಾರಿ ಮೋಹನ್ ಕುಮಾರ್, ಡಿವೈಎಸ್‌ಪಿ.ನಾಗರಾಜ್, ಇನ್ ಸ್ಪೆಕ್ಟರ್ ಬಸವನಗೌಡ.ಕೆ.ಪಾಟೀಲ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net