ವಾಂತಿ-ಭೇದಿಯಿಂದ ಜನ ಅಸ್ವಸ್ಥ

IMG-20230627-WA0205
Published on


ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಹಿಮ್ಲಾಪುರ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ವಾಂತಿ-ಭೇದಿ ಉಲ್ಬಣವಾಗಿದ್ದು ಮಂಗಳವಾರ 40ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮದಲ್ಲಿ ಕಳೆದ 4 ದಿನಗಳಿಂದ ಜನರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸೋಮವಾರ ಹಚ್ಚಾಗಿದೆ. ನಲ್ಲಿಯಿಂದ ಪೂರೈಕೆಯಾಗುವ ನೀರಿನಿಂದಲೇ ಸಮಸ್ಯೆಯಾಗಿದೆ ಎಂದು ಶಂಕಿಸಲಾಗಿದೆ. ಅಲ್ಲದೆ, ನೀರು ಪೂರೈಕೆ ಮಾಡುವ ಟ್ಯಾಂಕ್ ಶುದ್ಧೀಕರಣ ಮಾಡದ ಕಾರಣದಿಂದಲೇ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಗ್ರಾಮಕ್ಕೆ ಮಂಗಳವಾರ ಜಿಲ್ಲಾಕಾರಿ ಸ್ನೇಹಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾತ್ಕಾಲಿಕ ಚಿಕಿತ್ಸೆ ಕೇಂದ್ರ ತೆರೆಯಲಾಗಿದ್ದು,15 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net