ವಾಣಿಜ್ಯಉದ್ದೇಶಕ್ಕೆ ಕೊಳವೆಬಾವಿ ನೀರು ಮಾರಾಟ ನಿಷೇಧ

CTD T.VENKTESH--0005
Published on

ಚಿತ್ರದುರ್ಗ: ಜಿಲ್ಲೆಯಲ್ಲಿ ತೀವ್ರ ಬರಗಾಲ ಹಿನ್ನೆಲೆಯಲ್ಲಿ ಜನ,ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಕೊಳವೆ ಬಾವಿಗಳಲ್ಲಿ ದಿನದಿಂದ ದಿನಕ್ಕೆ ನೀರಿನ ಪ್ರಮಾಣ ಗಣನೀಯವಾಗಿ ಕುಸಿಯುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವುದು ಜಿಲ್ಲಾಡಳಿತದ ಪ್ರಥಮ ಆದ್ಯತೆಯಾಗಿದೆ.
ಖಾಸಗಿ ಕೊಳವೆಬಾವಿ ಮಾಲೀಕರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ,ನೀರು ಮಾರಾಟ ಮಾಡುವುದನ್ನು ಉದ್ದಿಮೆ ಮಾಡಿಕೊ ಂಡಿದ್ದಾರೆ. ಜಿಲ್ಲಾದ್ಯಂತ ಅವ್ಯಾಹತವಾಗಿ ನೀರು ಮಾರಾಟ ಮಾಡುವ ಪ್ರಕರಣಗಳು ಕಂಡುಬರುತ್ತಿವೆ. ವಾಣಿಜ್ಯ ಉದ್ದೇಶಗಳಿಗೆ ನೀರು ಮಾರಾಟ ಮಾಡುವುದನ್ನು ನಿಷೇಧಿಸಲು ಜಿಲ್ಲಾವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.
ಇದರ ಅನ್ವಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಜಿಲ್ಲಾ ವ್ಯಾಪ್ತಿಯಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ವಾಣಿಜ್ಯ ಉದ್ದೇಶಕ್ಕೆ ಕುಡಿಯುವ ನೀರು ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಡಿಸಿ ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net