ವಾದ್ಯ ಸಂಗೀತ ಸ್ಪರ್ಧೆಯಲ್ಲಿ ನಂದೀಶ್‌ಗೆ ಪ್ರಥಮ ಸ್ಥಾನ

20blrp1
Published on

ಬೇಲೂರು: ಜಿಲ್ಲಾ ಮಟ್ಟದ ವಾದ್ಯ ಸಂಗೀತ ಸ್ಪರ್ಧೆಯಲ್ಲಿ ಬೇಲೂರಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ನಂದೀಶ್ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ನಂದೀಶನನ್ನು ಮಕ್ಕಳ ಮತ್ತು ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಧರಣಿ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಾದ್ಯ ಸಂಗೀತ ಸ್ಪರ್ಧೆಯಲ್ಲಿ ಬೇಲೂರು ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ನಂದೀಶ್, ಸಾಕ್ಸೋಫೋನ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಶ್ರೀಲಕ್ಷ್ಮೀ ಮಂಗಳವಾದ್ಯ ಮತ್ತು ಸಂಗೀತ ಕಲಾ ಸೇವಾ ಟ್ರಸ್ಟ್ ಅಧ್ಯಕ್ಷ ನರಸಿಂಹಸ್ವಾಮಿ ಮಾತನಾಡಿ, ನಮ್ಮ ಟ್ರಸ್ಟ್ ವತಿಯಿಂದ ವಾದ್ಯ ಸಂಗೀತ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿ ನಂದೀಶ್ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದಿರುವುದು ಸಂತಸ ತಂದಿದೆ. ಈ ವಿದ್ಯಾರ್ಥಿ ಸತತ ನಾಲ್ಕು ವರ್ಷದಿಂದ ಸಂಗೀತಾಭ್ಯಾಸ ಮಾಡುತ್ತಿದ್ದಾನೆ. ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಸಂಗೀತಾ ವಾದ್ಯ ಸ್ಪರ್ಧೆಯ ಸಾಕ್ಸೋಫೋನ್ ವಾದನದಲ್ಲಿ ಪ್ರಥಮ ಸ್ಥಾನ ಗಳಿಸಿದ ಸಂದರ್ಭ ಮಕ್ಕಳ ಮತ್ತು ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಧರಣಿ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿ ಪ್ರೋತ್ಸಾಹಿಸಿದ್ದು, ರಾಜ್ಯ ಮಟ್ಟದಲ್ಲೂ ಪ್ರಶಸ್ತಿ ಗಳಿಸಿ ಬೇಲೂರಿನ ಕೀರ್ತಿ ಹೆಚ್ಚಿಸಲಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net