ವಾಯುಮಾಲಿನ್ಯ ತಡೆಗೆ ಪಣ ತೊಡಿ

23b HBD 3
ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ನಿಮಿತ್ತ ಚಿಟಗುಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಭಾಲ್ಕಿ ಎಆರ್‌ಟಿಒ ಮಹ್ಮದ್ ಜಾಫರ್ ಸಾಧಿಕ್ ಬಹುಮಾನ ವಿತರಿಸಿದರು. ಪ್ರಾಚಾರ್ಯ ಡಾ.ಜಯಕುಮಾರ ಸಿಂಧೆ ಇತರರಿದ್ದರು.
Published on

ಚಿಟಗುಪ್ಪ: ವಾಯುಮಾಲಿನ್ಯದಿಂದ ಮಾನವ ಜೀವಕ್ಕೆ ನಾನಾ ಸಂಕಷ್ಟಗಳು ಎದುರಾಗುತ್ತಿದ್ದು, ತಕ್ಷಣವೇ ಪ್ರತಿಯೊಬ್ಬರೂ ವಾಯುಮಾಲಿನ್ಯ ತಡೆಗಟ್ಟುಲು ಪಣ ತೊಡಬೇಕೆಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಹ್ಮದ್ ಜಾಫರ್ ಸಾಧಿಕ್ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಶನಿವಾರ ಭಾಲ್ಕಿಯ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಶನಿವಾರ ಏರ್ಪಡಿಸಿದ್ದ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಚ್ಚು ಹೊಗೆ ಸೂಸುವ ವಾಹನವೂ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ. ಪರಿಸರ ಸಂರಕ್ಷೆಣೆಗೆ ಎಲ್ಲರೂ ಕೈಜೋಡಿಸಬೇಕು. ೨೦೧೦ರಿಂದ ಇಲ್ಲಿಯವರೆಗೆ ಸುಮಾರು ೫೦೦೦ ಸಸಿಗಳನ್ನು ಉಚಿತವಾಗಿ ಕಚೇರಿಯಿಂದ ವಾಹನ ನೋಂದಣಿಗೆ ಬಂದ ಸಾರ್ವಜನಿಕರಿಗೆ ವಿತರಿಸಲಾಗಿದೆ ಎಂದು ತಿಳಿಸಿದರು.

ವಾಯುಮಾಲಿನ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪ್ರಮಾಣಪತ್ರ ನೀಡಿ ಜಾಗೃತಿ ಮೂಡಿಸಲಾಯಿತು. ಪ್ರಾಚಾರ್ಯ ಡಾ.ಜಯಕುಮಾರ ಸಿಂಧೆ, ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net