

ದಾವಣಗೆರೆ: ಬ್ಯಾಂಕ್‌ಗಳಿನ್ನು ವಾರದಲ್ಲಿ ಐದು ದಿನವಷ್ಟೇ ಕಾರ್ಯನಿರ್ವಹಿಸುವ ಕುರಿತು ಚರ್ಚೆ ಅಂತಿಮಗೊಂಡಿದ್ದು, ಕೇಂದ್ರ ಸರ್ಕಾರ ಅನುಮತಿ ನೀಡುವುದು ಬಾಕಿ ಇದೆ ಎಂದು ಬ್ಯಾಂಕ್ ನೌಕರರ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ಹೇಳಿದರು.
ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್ (ಕೆಪಿಬಿಇಎಫ್)ನಿಂದ ನಗರದ ಕುವೆಂಪು ಕನ್ನಡ ಭವನದಲ್ಲಿ ಶನಿವಾರ ಆಯೋಜಿಸಿದ್ದ ಮಹಿಳಾ ಬ್ಯಾಂಕ್ ಉದ್ಯೋಗಿಗಳ ಆರನೇ ರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿ, ಬ್ಯಾಂಕ್‌ಗಳು ಹಾಲಿ ಎರಡು, ನಾಲ್ಕನೇ ಶನಿವಾರಗಳಂದು ರಜೆ ಇರಲಿವೆ. ಪ್ರಸ್ತಾಪಿತ ಪದ್ಧತಿಯಲ್ಲಿ ಎಲ್ಲಾ ಶನಿವಾರ-ಭಾನುವಾರವೂ ರಜೆ ಇರಲಿದೆ ಎಂದು ಹೇಳಿದರು.