

ಲಕ್ಕೂರು: ಪ್ರಸಿದ್ಧ ಯಾತ್ರಾ ಸ್ಥಳವಾದ ಚಿಕ್ಕತಿರುಪತಿಯ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯಕ್ಕೆ ಶ್ರಾವಣ ಮಾಸದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪ್ರತಿ ಶನಿವಾರ ಹಾಗೂ ಭಾನುವಾರ ದೇಗುಲವನ್ನು ಸಂಪೂರ್ಣ ಬಂದ್ ಮಾಡುವಂತೆ ಜಿಲ್ಲಾಧಿಕಾರಿಗಳು ಆದೆೇಶಿಸಿದ್ದಾರೆ.
ಚಿಕ್ಕತಿರುಪತಿ ದೇವಾಲಯಕ್ಕೆ ಶ್ರಾವಣ ಮಾಸದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ರಾಜ್ಯದ ನಾನಾ ಭಾಗಗಳು ಸೇರಿ ನೆರೆಯ ತಮಿಳುನಾಡು, ಕೇರಳ, ಆಂಧ್ರ್ರಪ್ರದೇಶದಿಂದ ಭಕ್ತರು ಆಗಮಿಸಿ ದೇವರಿಗೆ ಹರಕೆ ಅರ್ಪಿಸಿ ದೇವರ ದರ್ಶನ ಪಡೆಯುತ್ತಾರೆ. ರಾಜ್ಯದಲ್ಲಿ ಕರೊನಾ 3ನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವ ಸಲುವಾಗಿ ಆದೇಶ ನೀಡಿದ್ದಾರೆ. ಉಳಿದಂತೆ ಸೋಮವಾರದಿಂದ ಶುಕ್ರವಾರದ ವರೆಗೂ ಕರೊನಾ ಮಾರ್ಗಸೂಚಿಯನ್ವಯ ಭಕ್ತರಿಗೆ ದೇವರ ದರ್ಶನ ಪಡೆಯಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.