ವಾರ್ಷಿಕೋತ್ಸವ ಸಂಭ್ರಮದಲ್ಲಿ ಮಿಂದೆದ್ದ ವಿದ್ಯಾರ್ಥಿಗಳು

15 gkp 01
Published on

ಗೋಣಿಕೊಪ್ಪ: ಇಲ್ಲಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ಸುಮಾರು 15 ಕ್ಕೂ ಹೆಚ್ಚು ಗೀತೆಗಳಿಗೆ ವಿದ್ಯಾರ್ಥಿಗಳು ನೃತ್ಯ ಮಾಡಿದರು. ಕ್ರೀಡಾ ಚಟುವಟಿಕೆ, ಚಿತ್ರಕಲೆ, ಅತ್ಯುತ್ತಮ ವಿದ್ಯಾರ್ಥಿ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಮಕ್ಕಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಶಿಕ್ಷಕರು, ಪಾಲಕರು, ಅತಿಥಿಗಳೊಂದಿಗೆ ವಿದ್ಯಾರ್ಥಿಗಳು ವಿಶೇಷವಾಗಿ ಫೋಟೋ ಕ್ಲಿಕ್ಕಿಸಿ ಖುಷಿಪಟ್ಟರು.
ವಿರಾಜಪೇಟೆ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮನ್ನಕಮನೆ ಸೌಮ್ಯಾ ಬಾಲು, ರೋಟರಿ ಸಂಸ್ಥೆಯ ಅಧ್ಯಕ್ಷೆ ಜಪ್ಪೆಕೊಡಿ ಸುಭಾಷಿಣಿ, ಲಯನ್ಸ್ ಸಂಸ್ಥೆಯ ಅಧ್ಯಕ್ಷ ಡಾ.ಅಮ್ಮಂಡ ಚಿಣ್ಣಪ್ಪ, ಗ್ರಾ.ಪಂ. ಸದಸ್ಯರಾದ ಕೊಣಿಯಂಡ ಬೋಜಮ್ಮ, ಬಿ.ಎನ್.ಪ್ರಕಾಶ್, ಶಾಲಾ ಆಡಳಿತ ಮಂಡಳಿ ಅಧ್ಯಕ್ಷೆ ಶಾಂತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಂ.ಜಿ. ಮೋಹನ್, ಮುಖ್ಯ ಶಿಕ್ಷಕ ಎಚ್.ಕೆ ಕುಮಾರ್ ಬಹುಮಾನ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net