

ಸಕಲೇಶಪುರ: ಆತ್ಮಸ್ಥೈರ್ಯ ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ ಎಂದು ಶಾಸಕ ಸೀಮೆಂಟ್ ಮಂಜು ಅಭಿಪ್ರಾಯಪಟ್ಟರು.ತಾಲೂಕಿನ ಬೆಳಗೋಡು ಗ್ರಾಮದಲ್ಲಿ ಧರ್ಮಶ್ರೀ ಸಂಘಟನೆಯಿಂದ ಸೋಮವಾರ ಹಮ್ಮಿಕೊಂಡಿದ್ದ ಎರಡನೇ ವರ್ಷದ ಹೂನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ಸಾಧನೆ ಮಾಡಲು ದೈಹಿಕ ಹಾಗೂ ಮಾನಸಿಕ ಆರೋಗ್ಯ ಅಗತ್ಯ. ಆರೋಗ್ಯವಂತ ಜೀವನಕ್ಕೆ ಕ್ರೀಡೆ ಸಹಕಾರಿ. ನಿತ್ಯ ವ್ಯಾಯಾಮ ಅಥಾವ ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಮಾನಸಿಕ, ದೈಹಿಕವಾಗಿ ಸದೃಢರಾಗಿರಬಹುದು. ಆದರೆ ಯುವ ಜನಾಂಗ ಮೈದಾನಕ್ಕಿಳಿಯುವುದೇ ಕಷ್ಟವಾಗಿದ್ದು, ಮೊಬೈಲ್ ಗೀಳು ಅತಿಯಾಗಿ, ಆರೋಗ್ಯ ಸಮಸ್ಯೆ, ಆತ್ಮಸ್ಥೈರ್ಯ ಕೊರತೆ ಎದುರಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.