ವಾಲ್ಮೀಕಿ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

30-GPT-1
ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಶಾಸಕ ಸಿ.ಎಸ್.ನಿರಂಜನಕುಮಾರ್ ಪುಷ್ಪಾರ್ಚನೆ ಮಾಡಿದರು. ರಾಮಚಂದ್ರ, ಎಚ್.ಎಂ.ಗಣೇಶ್‌ಪ್ರಸಾದ್, ಶಿವಕುಮಾರ್, ಪಿ.ಗಿರೀಶ್, ಸದಸ್ಯ ಕುಮಾರ್, ಕೆ.ಆರ್.ಲೋಕೇಶ್, ಎಚ್.ಎಸ್.ನಂಜುಂಡಪ್ರಸಾದ್ ಇದ್ದರು.
Published on

ಶಾಸಕ ಸಿ.ಎಸ್.ನಿರಂಜನಕುಮಾರ್ ಸಲಹೆ


ಗುಂಡ್ಲುಪೇಟೆ: ಜೀವನದಲ್ಲಿ ಎಲ್ಲರೂ ವಾಲ್ಮೀಕಿ ಅವರ ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು.

ತಾಲೂಕಿನ ಬೇಗೂರು ಗ್ರಾಮದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಬೇಟೆಗಾರ ನಾಗಿದ್ದ ವಾಲ್ಮೀಕಿ ತನ್ನಲ್ಲಾದ ಬದಲಾವಣೆಯಿಂದ ಮಹಾನ್ ದಾರ್ಶನಿಕರಾಗಿ ರಚಿಸಿದ ರಾಮಾಯಣ ಇಂದಿಗೂ ಎಲ್ಲರ ಮಾರ್ಗದರ್ಶಕ . ವಿಶ್ವದ ಎಲ್ಲ ಭಾಷೆಗಳಿಗೂ ಭಾಷಾಂತರಗೊಂಡ ಏಕೈಕ ಮಹಾಕಾವ್ಯ ಇಂದಿಗೂ ಪ್ರಸ್ತುತ ಎಂದರು.

ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಮಾತನಾಡಿ, ಹಿಂದುಳಿದಿದ್ದ ಜನಾಂಗದ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿವೆ. ಶಿಕ್ಷಣದ ಕೊರತೆಯಿಂದ ಜನಾಂಗವು ಹಿಂದುಳಿದಿದ್ದು ಎಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಬೇಕು ಎಂದು ಹೇಳಿದರು.
ಇದಕ್ಕೂ ಮುನ್ನ ಬಂಡಿಗೆರೆ ಮಹದೇಶ್ವರ ದೇವಸ್ಥಾದಿಂದ ಬೆಳ್ಳಿ ಸಾರೋಟಿನಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರವನ್ನು ಜನಪದ ಕಲಾತಂಡಗಳು ಹಾಗೂ ಮಂಗಳ ವಾದ್ಯಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಮೆರವಣಿಗೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್‌ಪ್ರಸಾದ್, ಮೈಸೂರು ಮೇಯರ್ ಶಿವಕುಮಾರ್, ಪಟ್ಟಣ ಪುರಸಭೆಯ ಅಧ್ಯಕ್ಷ ಪಿ.ಗಿರೀಶ್, ಸದಸ್ಯ ಕುಮಾರ್, ಹಾಪ್‌ಕಾಮ್ಸ್ ಜಿಲ್ಲಾಧ್ಯಕ್ಷ ಕೆ.ಆರ್.ಲೋಕೇಶ್, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಎಪಿಎಂಸಿ ನಿರ್ದೇಶಕ ಆರ್.ಎಸ್.ನಾಗರಾಜು, ತಾಪಂ ಮಾಜಿ ಸದಸ್ಯ ಎಚ್.ಎನ್.ಬಸವರಾಜು, ವಾಲ್ಮೀಕಿ ಯುವಕ ಸಂಘದ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಶಂಕರನಾಯ್ಕ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net