ವಾಲ್ಮೀಕಿ ರಾಮಾಯಣ ಜಗತ್ತಿನ ಸಾಮಾಜಿಕ ಪಠ್ಯ

CTD Kariyappa malige-----------
Published on

ಚಿತ್ರದುರ್ಗ: ಶ್ರೀ ವಾಲ್ಮೀಕಿ ರಾಮಾಯಣ ವೈಜ್ಞಾನಿಕ, ವೈಚಾರಿಕ ಚಿಂತನೆ ರೂಢಿಸಿಕೊಳ್ಳಬೇಕು ಎಂದು ಪ್ರಾಚಾರ್ಯ ಡಾ.ಜೆ. ಕರಿಯಪ್ಪ ಮಾಳಿಗೆ ಹೇಳಿದರು.

ಸರ್ಕಾರಿ ಕಲಾ ಕಾಲೇಜಿನ ಡಾ.ಬಿ.ಆರ್. ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದಲ್ಲಿ ಮಾತನಾಡಿ, ರಾಮಾಯಣ ಮಾನವ ಬದುಕಿನ ವಿಕಾಸದ ಚರಿತ್ರೆಯಾಗಿದೆ ಎಂದರು.

ಐಕ್ಯುಎಸಿ ಸಂಚಾಲಕಿ ಪ್ರೊ. ತಾರಿಣಿ ಶುಭದಾಯಿನಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಮನುಕುಲದ ಚರಿತ್ರೆ ಕುರಿತು ಗಂಭೀರವಾಗಿ ಚಿಂತನೆ ಮಾಡಿದ ಮಹನೀಯರು ಎಂದು ತಿಳಿಸಿದರು.

ಪರೀಕ್ಷಾ ನಿಯಂತ್ರಣಾಧಿಕಾರಿ ಪ್ರೊ.ಬಿ. ಸುರೇಶ್, ಪ್ರಾಧ್ಯಾಪಕರ ಸಂಘದ ಕಾರ್ಯದರ್ಶಿ ಪ್ರೊ. ಹನುಮಂತಪ್ಪ ಮಾತನಾಡಿದರು. ಮೇಲ್ವಿಚಾರಕ ರಂಗನಾಥ, ಕನ್ನಡ ಸಹಾಯಕ ಪ್ರಾಧ್ಯಾಪಕ ಪ್ರೊ. ಮಂಜುನಾಥ, ಪ್ರಾಧ್ಯಾಪಕಿ ಪ್ರೊ. ಸೌಮ್ಯಾ, ಪ್ರೊ. ಸಲ್ಮಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net