ವಾಲ್ಮೀಕಿ ಸಮಾಜದ ಪ್ರತಿಭಾನ್ವಿತ  ವಿದ್ಯಾರ್ಥಿಗಳಿಗೆ 8ರಂದು ಸನ್ಮಾನ

IMG-20230930-WA0021.jpg
Published on

ದಾವಣಗೆರೆ: ವಾಲ್ಮೀಕಿ ನಾಯಕ ಸಮುದಾಯದ ಎಸ್ಸೆಸ್ಸೆಲ್ಸಿ-ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗರದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಅ.8ರಂದು ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.

ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ, ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸುವರು. ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಅಧ್ಯಕ್ಷತೆ ವಹಿಸುವರು ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸಿ. ಶ್ರೀನಿವಾಸಮೂರ್ತಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇನ್‌ಸೈಟ್ ಐಎಎಸ್ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಬಿ.ಜಿ. ವಿನಯ್‌ಕುಮಾರ್ ವಿಶೇಷ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪ, ಮಾಜಿ ಶಾಸಕ ಎಚ್.ಪಿ.ರಾಜೇಶ್, ಎಸ್.ವಿ. ರಾಮಚಂದ್ರಪ್ಪ, ಮೇಯರ್ ವಿನಾಯಕ ಪೈಲ್ವಾನ್, ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಸ್.ಪದ್ಮನಾಭ್, ರಾಜ್ಯ ಪ.ಪಂ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ, ಕರ್ನಾಟಕ ಕುಸ್ತಿ ಫೆಡರೇಷನ್ ಅಧ್ಯಕ್ಷ ಬಿ. ವೀರಣ್ಣ ಇತರರು ಪಾಲ್ಗೊಳ್ಳುವರು. ಹಲವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಖಜಾಂಚಿ ಅಜ್ಜಯ್ಯ, ಸಂಘಟನಾ ಕಾರ್ಯದರ್ಶಿ ವಿಜಯಕುಮಾರ್, ಕಾರ್ಯದರ್ಶಿ ಗೋವರ್ಧನ್ ಕೂನಬೇವು, ಕೆ.ಸಿ.ನಿರಂಜನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net