ವಾಲ್ಮೀಕಿ ಸಮುದಾಯ ಸಂಘಟಿತರಾಗಲು ಸಲಹೆ

06Kush01
ಕುಶಾಲನಗರದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಸಮುದಾಯದ ಸಭೆಯಲ್ಲಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿದರು. ಕೆ.ಎನ್.ಅಶೋಕ್, ಚಂದನಕುಮಾರ್, ಕೆ.ಆರ್.ಮಂಜುಳಾ, ಸಿದ್ದಪ್ಪ, ವೈ.ಟಿ.ಪರಮೇಶ್ ಇತರರು ಇದ್ದರು.
Published on

ಕುಶಾಲನಗರ: ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಹಿರಿಯ ಶ್ರೀಗಳ ಸ್ಮರಣೋತ್ಸವ, ಪಟ್ಟಾಭಿಷೇಕದ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವ ಫೆಬ್ರವರಿ 8 ಮತ್ತು 9ರಂದು ವಿಜೃಂಭಣೆಯಿಂದ ನಡೆಯಲಿದೆ ಎಂದು ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ವಾಲ್ಮೀಕಿ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು, ಶ್ರೇಣಿಕೃತ ವ್ಯವಸ್ಥೆಯ ದೇಶದಲ್ಲಿ ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದಾಗ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನವನ್ನು ಬರೆದು ನೊಂದವರಿಗೆ ಬೆಳಕಾದರು. ವಾಲ್ಮೀಕಿ ಸಮುದಾಯದವರು ಸಂಘಟಿತರಾಗುವ ಮೂಲಕ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕಿದೆ ಎಂದು ತಿಳಿಸಿದರು.
ವಾಲ್ಮೀಕಿ ನಾಯಕ ಸಮುದಾಯದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್.ಅಶೋಕ್, ಯುವ ಘಟಕದ ಅಧ್ಯಕ್ಷ ಚಂದನಕುಮಾರ್, ಕೂಡುಮಂಗಳೂರು ಅಧ್ಯಕ್ಷ ವೆಂಕಟೇಶ್, ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿದ್ದಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕೆ.ಆರ್.ಮಂಜುಳಾ, ಪ್ರಮುಖರಾದ ಮಂಜುಳಾ, ಶಿವಾನಂದ, ಸುರೇಶ್, ಕೂಡ್ಲೂರು ವೈ.ಟಿ.ಪರಮೇಶ್, ಕರಿಯಪ್ಪ, ಕೆ.ಆರ್.ಚಂದ್ರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net