

ಅಥಣಿ ಗ್ರಾಮೀಣ: ಅಥಣಿ ತಾಲೂಕಿನ ಪಾರ್ಥನಹಳ್ಳಿ ಗ್ರಾಮದ ಬಳಿ ಜತ್ತ&ಜಾಂಬೋಟಿ ರಾಜ್ಯ ಹೆದ್ದಾರಿ ಮೇಲೆ ಅಪರಿಚಿತ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಗ್ರಾಮದ ಯುವಕ ಸುನೀಲ ಮಲ್ಲಪ್ಪ ಕುಳ್ಳೋಳ್ಳಿ (17) ಸ್ಥಳದಲ್ಲೇ ಮೃತಪಟ್ಟ ಟನೆ ಭಾನುವಾರ ಸಂಭವಿಸಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಅಥಣಿ ಠಾಣೆ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಅಥಣಿ ಸಿಪಿಐ ಸಂತೋಷ ಹಳ್ಳೂರ, ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.