ವಿ.ಕವಿತಾಗೆ ಪ್ರಥಮ ರ್ಯಾಂಕ್‌

Kavitha
Published on

ಚಿತ್ರದುರ್ಗ: ದಾವಣಗೆರೆ ವಿಶ್ವವಿದ್ಯಾಲಯದಿಂದ 2023ರ ಜುಲೈ-ಆಗಸ್ಟ್‌ನಲ್ಲಿ ನಡೆದ ಅಂತಿಮ ಬಿ.ಕಾಂ ಪದವಿ ಪರೀಕ್ಷೆಯಲ್ಲಿ ನಗರದ ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ವಿ.ಕವಿತಾ ಪ್ರಥಮ ರ್ಯಾಂಕ್‌ ಗಳಿಸಿದ್ದಾರೆ. ವಿದ್ಯಾರ್ಥಿನಿಯ ಶೈಕ್ಷಣಿಕ ಸಾಧನೆಗೆ ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಂ.ಚಂದ್ರಪ್ಪ, ಆಡಳಿತಾಧಿಕಾರಿ ಎಚ್.ಚಂದ್ರಕಲಾ, ಸಿಇಒ ಎಂ.ಸಿ.ರಘುಚಂದನ್, ಕಾಲೇಜಿನ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net