ವಿ.ಸೋಮಣ್ಣ ಜನ್ಮದಿನದ ಅಂಗವಾಗಿ ಅನ್ನ ಸಂತರ್ಪಣೆ

20rajesh6
Published on

ಚಾಮರಾಜನಗರ: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಜನ್ಮದಿನದ ಅಂಗವಾಗಿ ಅವರ ಅಭಿಮಾನಿ ಬಳಗದ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.

ನಗರದ ಜಿಲ್ಲಾಸ್ಪತ್ರೆಯ ಮುಂಭಾಗ ಭಾನುವಾರ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಕಾರ್ಯ ನಡೆಯಿತು. ಬಳಿಕ ಒಳ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ವಿ.ಸೋಮಣ್ಣ ಅಭಿಮಾನಿ ಬಳಗದ ಸ್ಟೈಲ್ ಮಂಜು ಮಾತನಾಡಿ, ಅಭಿವೃದ್ಧಿಯ ಹರಿಕಾರ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾಸ್ಪತ್ರೆಯ ಒಳ ರೋಗಿಗಳಿಗೆಹಣ್ಣು ವಿತರಣೆ ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದೆ. ಮಲೈಮಹದೇಶ್ವರ, ಶ್ರೀಚಾಮರಾಜೇಶ್ವರಸ್ವಾಮಿ ಅವರಿಗೆ ಹೆಚ್ವು ಆರೋಗ್ಯ, ಆಯಸ್ಸು ಕರುಣಿಸಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ರಾಜುನಾಯಕ, ಸೋಮವಾರಪೇಟೆ ವಿಶ್ವ, ದೇವರಾಜ್, ಕಾವುದವಾಡಿ ಗುರು,ರಾಧಾಕೃಷ್ಣ, ಸಿ.ಎಂ.ಕೃಷ್ಣಮೂರ್ತಿ, ಮಹದೇವಸ್ವಾಮಿ, ನಾಗರಾಜು, ರವಿ, ವಿಘ್ನೇಶ್, ರಾಜು, ಮಹದೇವಸ್ವಾಮಿ, ಕೋಟಂಬಳ್ಳಿ ಮಹೇಶ್, ಆಟೋ ನಟರಾಜು ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net